2026-06-08 01:20:07

108 TVK MLAs likely to resign if DMK | ಡಿಎಂಕೆ ಡಿಎಂಡಿಕೆ ಸರ್ಕಾರ ರಚಿಸಿದರೆ ಟಿವಿಕೆಯ108 ಶಾಸಕರ ರಾಜೀನಾಮೆ ಸಾಧ್ಯತೆ | Speed News Kannada

108 TVK MLAs likely to resign if DMK | ಡಿಎಂಕೆ ಡಿಎಂಡಿಕೆ ಸರ್ಕಾರ ರಚಿಸಿದರೆ ಟಿವಿಕೆಯ108 ಶಾಸಕರ ರಾಜೀನಾಮೆ ಸಾಧ್ಯತೆ | Speed News Kannada

ಚೆನ್ನೈ: ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ಜತೆಗೂಡಿ ಸರ್ಕಾರ ರಚಿಸಲು ಮುಂದಾದರೆ ಟಿವಿಕೆ ಪಕ್ಷದ ಎಲ್ಲ ಶಾಸಕರೂ ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೆಲವು ಮೂಲಗಳ ಪ್ರಕಾರ ಸರ್ಕಾರ ರಚನೆ ಸಂಬಂಧ ಎಂ.ಕೆ ಸ್ಟಾಲಿನ್ ಮತ್ತು ಇ ಪಳನಿಸ್ವಾಮಿ ಮಾತುಕತೆ ನಡೆಸಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಟಿವಿಕೆ ಶಾಸಕರು ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಈ ವದಂತಿಗಳಿಗೆ ಪೂರಕವಾಗಿ ಎಐಎಡಿಎಂಕೆ ಪಕ್ಷವು ಎನ್ ಡಿಎ ಮೈತ್ರಿ ಕಡಿದುಕೊಳ್ಳಲು ಮುಂದಾಗಿರುವ ಸುದ್ದಿಗಳು ಬಿತ್ತರಗೊಳ್ಳುತ್ತಿವೆ.
ಎಲ್ಲ 108 ಶಾಸಕರು ರಾಜೀನಾಮೆ ಸಲ್ಲಿಸಲು ಸಿದ್ಧರಾಗುವಂತೆ ಟಿವಿಕೆ ಮುಖಂಡ ವಿಜಯ ಸೂಚನೆ ನೀಡಿದ್ದಾರೆ. ನಿನ್ನೆ ಲೋಕಭವನದಲ್ಲಿ 2ನೇ ಬಾರಿಗೆ ರಾಜ್ಯಪಾಲರನ್ನ ಭೇಟಿಯಾಗಿದ್ದ‌ ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಸರ್ಕಾರ ರಚಿಸಲು ಹಕ್ಕು ಮಂಡಿಸಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಬಹುಮತ ಸಾಬೀತುಪಡಿಸುವುದಾಗಿ ಹೇಳಿದ್ದರು. ಇದಕ್ಕೆ ಒಪ್ಪದ ರಾಜ್ಯಪಾಲರು, ಮೊದಲು 118 ಶಾಸಕರ ಒಪ್ಪಿಗೆ ಪತ್ರ ನೀಡಿದರೆ ಸರ್ಕಾರ ರಚನೆಗೆ ಅವಕಾಶ ನೀಡುವುದಾಗಿ ತಿಳಿಸಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.