2026-06-25 02:10:32

16 convicts including Vinay Kulkarni sentenced to life imprisonment | ಯೋಗೀಶ್‌ ಗೌಡ ಕೊಲೆ ಕೇಸ್‌, ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ | Speed news kannada

16 convicts including Vinay Kulkarni sentenced to life imprisonment | ಯೋಗೀಶ್‌ ಗೌಡ ಕೊಲೆ ಕೇಸ್‌, ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ | Speed news kannada

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ. 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಓರ್ವ ಆರೋಪಿ ಇನ್‌ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. ಟಿಂಕರಿಕರ್‌ ಕೊಲೆ ಪ್ರಕರಣದಲ್ಲಿ ಭಾಗಿಯಾಗದೇ ಇದ್ದರೂ, ಭ್ರಷ್ಟಾಚಾರ ಎಸಗಿದ್ದಾರೆ ಅನ್ನೋ ಆರೋಪ ಸಾಬೀತಾದ ಹಿನ್ನೆಲೆ ಕೋರ್ಟ್‌ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ಇನ್ನುಳಿದಂತೆ ಬಸವರಾಜ್‌ ಮುತ್ತಗಿಗೆ ಮಾಫಿ ಸಾಕ್ಷಿ ಸ್ಥಾನ ಖಚಿತಪಡಿಸಿದೆ. ಮೃತ ಯೋಗೀಶ್‌ ಗೌಡ ಮಕ್ಕಳಿಗೆ 16 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್‌ ಸೂಚನೆ ನೀಡಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.