ಇಂಡಿಯನ್ ಪ್ರಿಮಿಯರ್ ಲೀಗ್‌ನ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಐಪಿಎಲ್‌ನ 2 ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಇಂದು ಬೆಂಗಳೂರಿನಲ್ಲಿ ಹಣಾಹಣಿಗೆ ಸಜ್ಜಾಗಿವೆ. ಆರ್‌ಸಿಬಿ ಪಂದ್ಯಗಳನ್ನು ವೀಕ್ಷಿಸಲು ಹೆಚ್ಚು ಜನಗಳು ಸೇರಬಹುದು ಎಂಬ ನಿಟ್ಟಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಹಿಂದೆ ಎಸ್‌ಆರ್‌ಹೆಚ್ ಪಂದ್ಯದಲ್ಲಿ ಆದ ಕೆಲವು ಸಣ್ಣ ಪುಟ್ಟ ತಪ್ಪುಗಳನ್ನು ಸರಿಪಡಿಸಲು ಹಾಗೂ ಕ್ರಿಕೆಟ್ ಪ್ರಿಯರ ಸುರಕ್ಷತೆ ಇನ್ನಷ್ಟು ಖಚಿತಪಡಿಸಿಕೊಳ್ಳಲು ಈ ಬಾರಿ ಭದ್ರತಾ ವ್ಯವಸ್ಥೆಗಳನ್ನ ಮತ್ತಷ್ಟು ಬಿಗಿಗೊಳಿಸಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಭದ್ರತೆಗಾಗಿ ಸುಮಾರು 2,300 ಪೊಲೀಸರನ್ನ ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ.