2026-06-25 03:51:39

21 year girl student arrested; 35 lakh worth hydro ganja seized| 21 ವರ್ಷದ ವಿದ್ಯಾರ್ಥಿನಿ ಬಂಧನ; 35 ಲಕ್ಷ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ | Speed News Kannada

21 year girl student arrested; 35 lakh worth hydro ganja seized| 21 ವರ್ಷದ ವಿದ್ಯಾರ್ಥಿನಿ ಬಂಧನ; 35 ಲಕ್ಷ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ | Speed News Kannada

ಮಂಗಳೂರು: ಚೆನ್ನೈನಿಂದ ಮಂಗಳೂರಿಗೆ ಹೈಡ್ರೋವಿಡ್ ಗಾಂಜಾ ಸಾಗಾಣೆ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಿವಾಸಿ 21 ವರ್ಷದ ಸುಹಾನ ಬಂಧಿತ ಆರೋಪಿ.  ಈಕೆ ಕುಂದಾಪುರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಮೇ 12 ರಂದು ನಗರದ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಡ್ರಗ್ಸ್‌ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಈಕೆಯನ್ನು ಬಂಧಿಸಿದ್ದಾರೆ.

ಸುಹಾನಾಳಿಂದ ಸುಮಾರು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋವಿಡ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಈಕೆ ಈ ಮಾದಕ ವಸ್ತುವನ್ನು ಚೆನ್ನೈನಿಂದ ತರಿಸಿಕೊಂಡು ಸ್ಥಳೀಯ ಕಾಲೇಜು ವಿದ್ಯಾರ್ಥಿಗಳು ಹಾಗೂ ಶ್ರೀಮಂತ ಗ್ರಾಹಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದಳು.

ಕೇವಲ 21 ವರ್ಷದ ಈಕೆ ಈಗಾಗಲೇ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದತಿಳಿದು ಬಂದಿದೆ. ಈಕೆಯ ಮೇಲೆ ಈ ಹಿಂದೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಈಕೆಯ ವಿರುದ್ಧ ಡ್ರಗ್ಸ್‌ ಸಾಗಾಟ ಪ್ರಕರಣ ದಾಖಲಾಗಿದೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.