2026-03-07 07:13:08

2nd PUC student missing | ಉಡುಪಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ ದೂರು ದಾಖಲು | Speed News Kannada

 2nd PUC student missing | ಉಡುಪಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ ದೂರು ದಾಖಲು | Speed News Kannada

ಉಡುಪಿ ಫೆ.24: 20 ವರ್ಷದ ಯುವತಿಯೊಬ್ಬರು ಕಟಪಾಡಿಯಿಂದ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.. ನಾಪತ್ತೆಯಾದ ವಿದ್ಯಾರ್ಥಿನಿಯನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಮೂಲದ ಯುವತಿ ಎಂದು ಗುರುತಿಸಲಾಗಿದೆ..ನಾಪತ್ತೆಯಾದ ಯುವತಿ ಉಡುಪಿ ನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಟಪಾಡಿಯ ಆನೆಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಅವರು ಫೆಬ್ರವರಿ 20 ರಂದು ಕಾಲೇಜಿಗೆ ರಜೆ ಹಾಕಿ ಮನೆಯಿಂದ ಹೊರಹೋಗಿದ್ದರು. ಆದರೆ, ಅಂದಿನಿಂದ ಅವರು ಮನೆಗೆ ಮರಳಿಲ್ಲ. ಈ ಸಂಬಂಧ ನಾಪತ್ತೆ ದೂರು ದಾಖಲಾಗಿದ್ದು, ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ. 5 ಅಡಿ 6 ಇಂಚು ಎತ್ತರ, ಗೋಧಿ ಬಣ್ಣ ಮತ್ತು ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಆಕೆ ಕನ್ನಡ, ಲಂಬಾಣಿ ಮತ್ತು ಹಿಂದಿ ಭಾಷೆ ಮಾತನಾಡಬಲ್ಲರು. ಈ ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಿದ್ದಲ್ಲಿ ಸಾರ್ವಜನಿಕರು ಕೂಡಲೇ ಕಾಪು ಪೊಲೀಸ್‌ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.