2026-04-24 12:39:08

2nd round of US-Iran negotiations | 2ನೇ ಸುತ್ತಿನ ಮಾತುಕತೆಗೆ ಮುಂದಾದ ಅಮೆರಿಕ -ಇರಾನ್‌ ಸಂಧಾನ | Speed news kannada

2nd round of US-Iran negotiations | 2ನೇ ಸುತ್ತಿನ ಮಾತುಕತೆಗೆ ಮುಂದಾದ ಅಮೆರಿಕ -ಇರಾನ್‌ ಸಂಧಾನ | Speed news kannada

ಇರಾನ್ ಜೊತೆ ಎರಡನೇ ಸುತ್ತಿನ ನೇರ ಮಾತುಕತೆ ಮುಂದಿನ ಎರಡು ದಿನಗಳಲ್ಲಿ ಪಾಕಿಸ್ತಾನದಲ್ಲಿ ನಡೆಯಬಹುದು ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ತಿಳಿಸಿದ್ದಾರೆ. ಎರಡನೇ ಸುತ್ತಿನ ಮಾತುಕತೆ ಯುರೋಪ್‌ನಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಮುಂದಿನ ಎರಡು ದಿನಗಳಲ್ಲಿ ಪಾಕ್‌ನ ಇಸ್ಲಾಮಾಬಾದ್‌ನಲ್ಲಿಯೇ ಮಾತುಕತೆ ನಡೆಯಲಿದೆ ಎನ್ನಲಾಗಿದೆ. ನಾವು ಅಲ್ಲಿಗೆ ಹೋಗಲು ಹೆಚ್ಚು ಒಲವು ತೋರುತ್ತೇವೆ ಎಂದು ಟ್ರಂಪ್‌ ಹೇಳಿದ್ದಾರೆ. ಮೊದಲ ಸುತ್ತಿನ ಮಾತುಕತೆಯಲ್ಲಿ ಉಪಾಧ್ಯಕ್ಷ ಜೆಡಿ ವ್ಯಾನ್ಸ್, ಅಧ್ಯಕ್ಷರ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಮತ್ತು ಟ್ರಂಪ್ ಅವರ ಅಳಿಯ ಜೇರೆಡ್ ಕುಶ್ನರ್ ಅಮೆರಿಕದ ರಾಜತಾಂತ್ರಿಕರ ತಂಡದ ನೇತೃತ್ವ ವಹಿಸಿದ್ದರು. ಆದರೆ, ಮಾತುಕತೆ ವಿಫಲವಾಗಿತ್ತು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.