2026-04-24 02:54:11

3 bills, including womens reservation, introduced in Lok Sabha | ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ | Speed news kannada

3 bills, including womens reservation, introduced in Lok Sabha | ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ | Speed news kannada

ಇಂದಿನಿಂದ (ಏ.16ರಿಂದ) 3 ದಿನಗಳ ಕಾಲ ಸಂಸತ್‌ ಅಧಿವೇಶನ ನಡೆಯಲಿದೆ. ಲೋಕ ಸಭೆ ಗದ್ದಲದ ನಡುವೆಯು ಮೂರು ಮೀಸಲಾತಿ ಹಾಗೂ ಗಡಿ ನಿರ್ಣಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು ಮಸೂದೆಯನ್ನು ಮಂಡನೆಮಾಡಲಾಗಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದರು. ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಮಸೂದೆಯನ್ನು ವಿರೋಧಿಸಿದ್ದು, ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಮಲ್ಲಿಕಾರ್ಜುನ ಖರ್ಗೆ ಬುಧವಾರದ ಸಭೆ ಬಳಿಕ ಮಾತನಾಡಿ, ನಾವೆಲ್ಲರೂ ಮಹಿಳಾ ಮೀಸಲಾತಿಯ ಪರವಾಗಿದ್ದೇವೆ. ಆದರೆ ಸರ್ಕಾರ ಇದನ್ನು ತರುತ್ತಿರುವ ವಿಧಾನ ರಾಜಕೀಯ ಪ್ರೇರಿತವಾಗಿದೆ. ಕ್ಷೇತ್ರ ಪುನರ್ವಿಂಗಡಣೆಯ ಹೆಸರಿನಲ್ಲಿ ಸರ್ಕಾರ ತಂತ್ರಗಳನ್ನು ಆಡುತ್ತಿದೆ,” ಎಂದು ನೇರವಾಗಿ ಆರೋಪಿಸಿದರು. ಸರ್ಕಾರವು ಜನಗಣತಿ ಮತ್ತು ಕ್ಷೇತ್ರ ಪುನರ್ವಿಂಗಡಣೆಯ ನಂತರವೇ ಮೀಸಲಾತಿ ಜಾರಿಯಾಗಲಿದೆ ಎಂಬ ಷರತ್ತು ವಿಧಿಸಿದೆ. ಇದು ಮೀಸಲಾತಿಯನ್ನು ಇನ್ನಷ್ಟು ವಿಳಂಬ ಮಾಡುವ ತಂತ್ರ ಎಂಬುದು ವಿರೋಧ ಪಕ್ಷಗಳ ವಾದವಾಗಿದೆ. ಇನ್ನೂ ಲೋಕಸಭೆಯಲ್ಲಿ ಅಧಿವೇಶನ ಉದ್ದೇಶಿಸಿ ಮೋದಿ ಮಾತನಾಡಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.