2026-06-25 02:08:11

3 year old child raped by fathers friend | ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ 3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ | Speed News Kannada

3 year old child raped by fathers friend | ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ 3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ | Speed News Kannada

ಆಂಧ್ರಪ್ರದೇಶ : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಆಂಧ್ರಪ್ರದೇಶದಲ್ಲಿ ಹೀನವಾದ ಕೃತ್ಯ ಬೆಳಕಿಗೆ ಬಂದಿದೆ. 3 ವರ್ಷದ ಹೆಣ್ಣುಮಗುವಿನ ಮೇಲೆ ಆಕೆಯ ತಂದೆಯ ಸ್ನೇಹಿತನೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಆಕೆಯ ತಂದೆಯನ್ನು ಭೇಟಿಯಾಗುವ ನೆಪದಲ್ಲಿ ಆತ ಮನೆಗೆ ಬಂದಿದ್ದ. ಆದರೆ, ಆಕೆಯ ಅಪ್ಪ ಮನೆಯಲ್ಲಿರಲಿಲ್ಲ. ಅಮ್ಮ ಒಳಗೆ ಅಡುಗೆ ಮಾಡುತ್ತಿದ್ದರು. ಈ ವೇಳೆ ಆ ಆರೋಪಿಯು ಮಗುವಿಗೆ ಬಿಸ್ಕತ್ ಕೊಡಿಸುತ್ತೇನೆ ಎಂದು ಹತ್ತಿರದ ದಿನಸಿ ಅಂಗಡಿಗೆ ಕರೆದೊಯ್ದನು. ಆಕೆಯನ್ನು ಅಂಗಡಿಗೆ ಕರೆದುಕೊಂಡು ಹೋಗುವಾಗ ಮಧ್ಯದಲ್ಲೇ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದಾದ ನಂತರ ಏನೂ ಆಗಿಯೇ ಇಲ್ಲವೆಂಬಂತೆ ಅವನು ಅವಳನ್ನು ವಾಪಾಸ್ ಕರೆದುಕೊಂಡು ಬಂದು ಅವಳ ಮನೆಯಲ್ಲಿ ಬಿಟ್ಟು ಓಡಿಹೋಗಿದ್ದಾನೆ.
ಮನೆಯಲ್ಲಿ ಆ ಮಗು ನೋವಿನಿಂದ ನಿರಂತರವಾಗಿ ಅಳುತ್ತಲೇ ಇದ್ದುದರಿಂದ ಆ ಮಗುವಿನ ತಾಯಿ ಅವಳನ್ನು ಪರೀಕ್ಷಿಸಿದಾಗ ರಕ್ತದ ಕಲೆಗಳು ಕಂಡುಬಂದವು. ಏನಾಯಿತೆಂದು ಕೇಳಿದಾಗ ಆಕೆ ನಡೆದ ವಿಚಾರ ಹೇಳಿದಳು. ಆರೋಪಿಯ ವಿರುದ್ಧ ಬಿಎನ್‌ಎಸ್ ಮತ್ತು ಪೋಕ್ಸ್ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಚಿಕ್ಕ ಮಕ್ಕಳಿಗೆ ಮನೆಯಲ್ಲೂ ಸುರಕ್ಷತೆ ಇಲ್ಲದಂತಾಗಿರುವುದು ಆತಂಕ ಸೃಷ್ಟಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.