ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ನಾಳೆ ಸಾಧನಾ ಸಮಾವೇಶ ನಡೆಯಲಿದೆ.
ಈ ಸಂಬಂಧ ಮಾತನಾಡಿದ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಈ ಸಮಾವೇಶದಲ್ಲಿ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಿದ್ದೇವೆ ಎಂದು ಗೃಹಸಚಿವ ಜಿ. ಪರಮೇಶ್ವರ್ ತಿಳಿಸಿದರು.
ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ವರ್ಷಗಳಾಗಿವೆ. ಚುನಾವಣಾ ಸಂದರ್ಭದಲ್ಲಿ ಕೊಟ್ಟ ಅನೇಕ ಭರವಸೆಗಳನ್ನು ಈಡೇರಿಸಲಾಗಿದೆ. ನಾಳೆ ಸಮಾವೇಶದಲ್ಲಿ ನಮ್ಮ ಸಾಧನೆಗಳನ್ನು ಜನರ ಮುಂದಿಡುತ್ತೇವೆ ಎಂದರು.
ಈ ಸಮಾವೇಶದಲ್ಲಿ ಯಾರ ಶಕ್ತಿ ಪ್ರದರ್ಶನವೂ ಇಲ್ಲ, ನನ್ನ ಶಕ್ತಿ ಪ್ರದರ್ಶನವೂ ಇಲ್ಲ. ಸರ್ಕಾರದ ಕಾರ್ಯಕ್ರಮಗಳನ್ನು ಕುರಿತು ಜನರಿಗೆ ತಿಳಿಸಿಕೊಡುವ ಸಮಾವೇಶ ಇದಾಗಿದೆ. ಇದು ಸರ್ಕಾರದ ಕಾರ್ಯಕ್ರಮ ಪಕ್ಷದ ಕಾರ್ಯಕ್ರಮ ಅಲ್ಲ. ಹಾಗಾಗಿ ಹೈಕಮಾಂಡ್ ನಾಯಕರನ್ನು ಕರೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಮಾವೇಶಕ್ಕೂ ಅಧಿಕಾರ ಹಸ್ತಾಂತರಕ್ಕೂ ಸಂಬಂಧ ಇಲ್ಲ. ಪಕ್ಷದ ಆಂತರಿಕ ವಿಚಾರಗಳನ್ನು ಸರ್ಕಾರದ ಸಾಧನಾ ಸಮಾವೇಶದ ಜತೆ ಬೆರೆಸಲು ಹೋಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಸಾರಿಗೆ ನೌಕರರು ಮುಷ್ಕರಕ್ಕೆ ಆಹ್ವಾನ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರ ಜೊತೆ ಚರ್ಚೆ ಮಾಡಿದ್ದಾರೆ. ಕಪ್ಪು ಬಾವುಟ ಪ್ರದರ್ಶನ ಮಾಡಬೇಡಿ ಎಮದು ಕೇಳಿಕೊಂಡಿದ್ದಕ್ಕೆ ಅವರು ಒಪ್ಪಿಕೊಂಡಿದ್ದಾರೆ. ಎಂದರು.