2026-03-07 06:55:50

5% reservation for Muslims in jobs | ಮಹಾರಾಷ್ಟ್ರ ಉದ್ಯೋಗ ಶಿಕ್ಷಣದಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇ 5 ರಷ್ಟು ಮೀಸಲಾತಿ ರದ್ದು | Speed News Kannada

5% reservation for Muslims in jobs | ಮಹಾರಾಷ್ಟ್ರ ಉದ್ಯೋಗ ಶಿಕ್ಷಣದಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇ 5 ರಷ್ಟು ಮೀಸಲಾತಿ ರದ್ದು | Speed News Kannada

ಮುಂಬೈ: ಮುಸ್ಲಿಮರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ನೀಡಲಾಗಿದ್ದ ಶೇ. 5 ರಷ್ಟು ಮೀಸಲಾತಿಯನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿದೆ.
ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದ್ದು, ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇ. 5 ರಷ್ಟು ಮೀಸಲಾತಿಗೆ ಕೋರ್ಟ್ ಮಧ್ಯಂತರ ತಡೆ ನೀಡಿರುವುದರಿಂದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರ ಬಿಜೆಪಿ ನೇತೃತ್ವದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. 
2014 ರಲ್ಲಿ ಕಾಂಗ್ರೆಸ್-ಎನ್‌ಸಿಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 5 ರಷ್ಟು ಮೀಸಲಾತಿಯನ್ನು ಘೋಷಿಸಿತ್ತು. ಈ ಸಂಬಂಧ 2014 ರ ಚುನಾವಣೆಗೂ ಮುನ್ನ ಸುಗ್ರೀವಾಜ್ಞೆಯನ್ನೂ ಹೊರಡಿಸಿತ್ತು. ಆದರೆ 2014 ರ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಈ ಸುಗ್ರೀವಾಜ್ಞೆ ರದ್ದಾಗಿತ್ತು.
ಇದೀಗ ಫಡ್ನವೀಸ್‌ ಸರ್ಕಾರ 2014 ಮತ್ತು 2015 ರಲ್ಲಿ ಹೊರಡಿಸಲಾಗಿದ್ದ ಎಲ್ಲಾ ಆದೇಶಗಳನ್ನು ರದ್ದುಗೊಳಿಸಿದೆ. ಸರ್ಕಾರದ ಈ ಕ್ರಮದ ವಿರುದ್ಧ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.