2026-06-25 04:11:32

6 killed as tractor falls off Tungabhadra bridge | ಕೊಪ್ಪಳ ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಉರುಳಿ ಬಿದ್ದು 6 ಮಂದಿ ಸಾವು | Speed News Kannada

6 killed as tractor falls off Tungabhadra bridge | ಕೊಪ್ಪಳ ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಉರುಳಿ ಬಿದ್ದು 6 ಮಂದಿ ಸಾವು | Speed News Kannada

ಕೊಪ್ಪಳ, ಮೇ 15. ಕೊಪ್ಪಳ ತಾಲೂಕಿನ ಮುನಿರಾಬಾದ್ ಸಮೀಪದ ತುಂಗಭದ್ರಾ ಸೇತುವೆ ಮೇಲೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದುರ್ಮರಣ ಹೊಂದಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. ವಿಜಯನಗರ ಜಿಲ್ಲೆ ಹಾಗೂ ಕೊಪ್ಪಳ ಜಿಲ್ಲೆಯ ಗಡಿಭಾಗದಲ್ಲಿರುವ ಟಿಬಿ ಡ್ಯಾಂ ಸಮೀಪ ಈ ದುರಂತ ಸಂಭವಿಸಿದೆ. ಹುಲಿಗೆಮ್ಮ ದೇವಸ್ಥಾನಕ್ಕೆ ದೇವರ ಕಾರ್ಯಕ್ಕಾಗಿ ತೆರಳುತ್ತಿದ್ದ ಕುಟುಂಬಸ್ಥರು ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಹಿಂಬದಿಯಿಂದ ವೇಗವಾಗಿ ಬಂದ ಟ್ಯಾಂಕರ್ ಲಾರಿ ಟ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ಯಾಕ್ಟರ್ ಸೇತುವೆ ಮೇಲಿಂದ ಕೆಳಗೆ ಬಿದ್ದಿದೆ ಎಂದು ತಿಳಿದುಬಂದಿದೆ ಪರಿಣಾಮ ಮಗು ಸೇರಿದಂತೆ ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೃತರೆಲ್ಲರೂ ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಹೊಸಪೇಟೆ ಹಾಗೂ ಕೊಪ್ಪಳದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದ್ದು, ಗಾಯಾಳುಗಳನ್ನು ತುರ್ತುವಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಆತಂಕಕಾರಿ ಹಿನ್ನೆಲೆ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಈ ಘಟನೆ ಸಂಬಂಧ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಕೊಪ್ಪಳ, ಮೇ 15. ಕೊಪ್ಪಳ ತಾಲೂಕಿನ ಮುನಿರಾಬಾದ್ ಸಮೀಪದ ತುಂಗಭದ್ರಾ ಸೇತುವೆ ಮೇಲೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದುರ್ಮರಣ ಹೊಂದಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.