2026-06-25 02:08:38

6 killed in horrific accident between car and private bus | ಕಾರು, ಖಾಸಗಿ ಬಸ್ ನಡುವೆ ಭೀಕರ ಅಪಘಾತ, 6 ಮಂದಿ ಸಾವು | Speed news kannada

6 killed in horrific accident between car and private bus | ಕಾರು, ಖಾಸಗಿ ಬಸ್ ನಡುವೆ ಭೀಕರ ಅಪಘಾತ, 6 ಮಂದಿ ಸಾವು | Speed news kannada

ಕಾರು ಮತ್ತು ಖಾಸಗಿ ಬಸ್​​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ. ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಗಾತದ ತೀವ್ರತೆಗೆ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.