ಕಾರು ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ. ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಗಾತದ ತೀವ್ರತೆಗೆ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.