2026-04-23 07:40:03

60day exemption for 1st class enrollment | State Government Official Order|1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ |ರಾಜ್ಯ ಸರ್ಕಾರ ಅಧಿಕೃತ ಆದೇಶ|Speed News Kannada

60day exemption for 1st class enrollment | State Government Official Order|1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ |ರಾಜ್ಯ ಸರ್ಕಾರ ಅಧಿಕೃತ ಆದೇಶ|Speed News Kannada

1ನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳವರೆಗೆ ಮಿತಿ ಸಡಿಲ ಮಾಡಿತ್ತು. ಇಂದು ಅಧಿಕೃತವಾಗಿ ಆದೇಶ ಮಾಡಿದೆ. ಈ ಮಿತಿ ಸಡಿಲ ಆದೇಶ 2026-27ನೇ ಸಾಲಿನ ದಾಖಲಾತಿಗೆ ಮಾತ್ರ ಅನ್ವಯ ಆಗುವಂತೆ ಆದೇಶ ಮಾಡಲಾಗಿದೆ. ಶಾಲೆಯ (School_ ಪ್ರಾರಂಭ ಜೂನ್ 1 ರಿಂದ ಅನ್ವಯವಾಗುವಂತೆ 60 ದಿನದ ಅವಧಿಗೆ ಮಗುವಿನ ವಯಸ್ಸು ಲೆಕ್ಕ ಹಾಕಿ ದಾಖಲಾತಿ ಮಾಡಿಕೊಳ್ಳುವಂತೆ ಆದೇಶದಲ್ಲಿ‌ ಉಲ್ಲೇಖ ಮಾಡಲಾಗಿದೆ. 

ಮಕ್ಕಳ ಪೋಷಕರು ವಯೋಮಿತಿ ಸಡಿಲಿಕೆಗೆ ಆಗ್ರಹಿಸಿ ವರ್ಷಗಳಿಂದ ಹೋರಾಟ ನಡೆಸುತ್ತಿದ್ದರು. ಸಿಎಂ, ಡಿಸಿಎಂ, ಶಿಕ್ಷಣ ಸಚಿವರ ಮನೆಗಳಿಗೆ ಪದೇಪದೇ ಹೋಗಿ ಒತ್ತಾಯ ಮಾಡುತ್ತಿದ್ದರು. ಈಗ ಸರ್ಕಾರದ ನಿರ್ಧಾರದಿಂದ ಈ ಮಕ್ಕಳ ಪೋಷಕರು ನಿಟ್ಟುಸಿರು ಬಿಡುವಂತಾಗಿದೆ.

ಪ್ರತೀ ಬಾರಿಯೂ ಈ ಸಮಸ್ಯೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ಕಾನೂನು ತಂದು ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ನಿರ್ಧರಿಸಿತ್ತು. ಇದುವರೆಗೆ ಎಲ್‌ಕೆಜಿ, ಯುಕೆಜಿಗೆ ರೆಗ್ಯುಲೇಟರಿ ನಿಯಮ ಇರಲಿಲ್ಲ. ಇದಕ್ಕಾಗಿ ಹೊಸ ಕಾನೂನು ತಂದು ಎಲ್‌ಕೆಜಿ, ಯುಕೆಜಿಯಲ್ಲೇ ದಾಖಲಾತಿಗೆ ವಯೋಮಿತಿ ನಿಗದಿ ಮಾಡಿ ಸ್ಪಷ್ಟತೆ ಕೊಡಲಾಗುವುದು ಎಂದು ಅಧಿವೇಶನದಲ್ಲಿ ಮಧು ಬಂಗಾರಪ್ಪ ತಿಳಿಸಿದ್ದರು. ಇದೀಗ ರಾಜ್ಯ ಸರ್ಕಾರ ಅಧಿಕೃತ ಆದೇಶ ಜಾರಿಗೊಳಿಸಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.