2026-03-07 07:21:27

65-Year-Old Woman Raped And Murdered | 65 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಹ*ತ್ಯೆ - ಆತ್ಮಹತ್ಯೆಗೆ ಶರಣಾದ ಆರೋಪಿ | Speed News Kannada

65-Year-Old Woman Raped And Murdered | 65 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಹ*ತ್ಯೆ - ಆತ್ಮಹತ್ಯೆಗೆ ಶರಣಾದ ಆರೋಪಿ | Speed News Kannada

ಬೆಂಗಳೂರು ರಾಜಧಾನಿ ಬೆಂಗಳೂರಲ್ಲಿ ದುಷ್ಟಕೃತ್ಯ ಗಳು ಹೆಚ್ಚುತ್ತಿದ್ದು, ಕ್ರೈಮ್ ಕೇಸ್ ಗಳು ಹೆಚ್ಚುತ್ತಿವೆ. ಇದೀಗ ಸಿಲ್ಕ್ ಬೋರ್ಡ್ ಸಮೀಪದ ಕೆಎಎಸ್ ಕಾಲೋನಿಯಲ್ಲಿ 65 ವರ್ಷದ ಮಹಿಳೆ ಮೇಲೆ ಮನೆಕೆಲಸದ ವ್ಯಕ್ತಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದು ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.ಮೃತ ಮಹಿಳೆಯನ್ನು ಸರಿತಾ ಎಂದು ಗುರುತಿಸಲಾಗಿದ್ದು, ಮನೆಗೆಲಸ ಮಾಡುತ್ತಿದ್ದ ದೇವರಾಜು (50) ಎಂಬಾತ ಈ ಕೃತ್ಯ ಎಸಗಿದ್ದಾನೆ. ಘಟನೆ ಶನಿವಾರ ಮಧ್ಯರಾತ್ರಿ ನಡೆದಿದ್ದು, ಇವತ್ತು ಬೆಳಗಿನ ಜಾವ ಸುಮಾರು 4.30ರ ವೇಳೆಗೆ ಪತಿ ಮನೆಗೆ ಬಂದು ನೋಡಿದಾಗ ವಿಚಾರ ಬಹಿರಂಗವಾಗಿದೆ.ಸರಿತಾ ಪತಿ ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದ್ದರು. ಬಳಿಕ ಸರಿತಾ ಅವರ ಕೋಣೆಗೆ ತೆರಳಿ ನೋಡಿದಾಗ ಭೀಕರ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಮೈಕೋ ಲೇಔಟ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.