2026-06-08 01:31:18

6people including 5children die in house fire due to short circuit | ಶಾರ್ಟ್ ಸರ್ಕೀಟ್ ನಿಂದ ಮನೆಗೆ ಬೆಂಕಿ 5 ಮಕ್ಕಳು ಸೇರಿದಂತೆ 6 ಮಂದಿ ಸಾ*ವು | Speed News Kannada

6people including 5children die in house fire due to short circuit | ಶಾರ್ಟ್ ಸರ್ಕೀಟ್ ನಿಂದ ಮನೆಗೆ ಬೆಂಕಿ 5 ಮಕ್ಕಳು ಸೇರಿದಂತೆ 6 ಮಂದಿ ಸಾ*ವು | Speed News Kannada

ಉತ್ತರ ಪ್ರದೇಶ : ಉತ್ತರ ಪ್ರದೇಶದ ಮೀರತ್‌ ನ ಕಿದ್ವಾಯಿ ನಗರದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಭೀಕರ ಬೆಂಕಿ ಅವಘಡದಲ್ಲಿ ಐವರು ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಆರು ತಿಂಗಳಿಗಿಂತ ಕಡಿಮೆ ವಯಸ್ಸಿನ ಇಬ್ಬರು ಅವಳಿ ಶಿಶುಗಳು ಸೇರಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದಲೇ ಅವಘಡ ನಡೆದಿದೆ ಎನ್ನಲಾಗಿದೆ.
ಇನ್ಸಾಲ್ ಎಂಬುವರ ಮನೆಯಲ್ಲಿ ಸೋಮವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಸದಸ್ಯರ ಕಿರುಚಾಟ ಕೇಳಿ ಜ್ವಾಲೆಯ ತೀವ್ರತೆಯನ್ನು ನೋಡಿ ಸ್ಥಳೀಯರು ನೆರವಿಗೆ ಮುಂದಾಗಿದ್ದು, ಅಷ್ಟರಲ್ಲಾಗಲೇ 6 ಮಂದಿ ಮೃತಪಟ್ಟಿದ್ದಾರೆ.
ಇನ್ನು ಗಾಯಾಳುಗಳನ್ನು ಛಾವಣಿಯ ಮೂಲಕ ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ವಸ್ತುಗಳು ಕರಕಲಾಗಿದೆ. ಅಕ್ಕಪಕ್ಕದ ಮನೆಗೂ ಹಾನಿಯಾಗಿದ್ದು, 6 ಮಂದಿಯ ಸಾವು ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.