2026-03-07 07:23:36

6Year Girl Raped By Three Minors | ಮೂವರು ಅಪ್ರಾಪ್ತರಿಂದ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ | Speed News Kannada

 6Year Girl Raped By Three Minors | ಮೂವರು ಅಪ್ರಾಪ್ತರಿಂದ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ | Speed News Kannada

ಆರು ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನವದೆಹಲಿಯಲ್ಲಿ ಜನವರಿ 28 ನಡೆದಿದೆ. ದೆಹಲಿಯ ಭಜನ್‌ಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 10, 13 ಮತ್ತು 14 ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲಕರು ಈ ಅತ್ಯಾಚಾರವೆಸಗಿದ್ದಾರೆ.
ಆರೋಪಿಗಳಲ್ಲಿ ಇಬ್ಬರು ಬಾಲಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಮೂರನೆಯವನು ಪರಾರಿಯಾಗಿದ್ದಾನೆ. ಮೂರನೇ ಆರೋಪಿಯ ಕುಟುಂಬ ಕೂಡ ನಾಪತ್ತೆಯಾಗಿದೆ.

ಈ ಘಟನೆ ಜನವರಿ 18 ರ ಮಂಗಳವಾರ ನಡೆದಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಂತರ ಹುಡುಗಿಯ ಮನೆಯವರು ಪೋಲೀಸರಿಗೆ ದೂರು ಕೊಟ್ಟರು. ಮೂವರು ಹುಡುಗರು ಆರು ವರ್ಷದ  ಹುಡುಗಿಯನ್ನು ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಗಳನ್ನು ಗುರುತಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಒಬ್ಬ ಪರಾರಿಯಾಗಿದ್ದಾನೆ. ಇಬ್ಬರು ಆರೋಪಿಗಳನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ.

ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದ್ದು, ಅಗತ್ಯ ಆರೈಕೆ ಮತ್ತು ಸಮಾಲೋಚನೆ ಒದಗಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು ಮೂರನೇ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.
ಮೂರನೇ ಆರೋಪಿಯನ್ನು ಪತ್ತೆ ಹಚ್ಚಲು ಶೋಧ ತಂಡವನ್ನು ರಚಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಶೀಘ್ರದಲ್ಲೇ ಮೂರನೇ ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ದೇಶದಲ್ಲಿ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರದ ವಿರುದ್ಧ ಕಠಿಣ ಕಾನೂನುಗಳಿವೆ, ಆದರೂ ಈ ಅಪರಾಧಗಳು ನಿರಂತರವಾಗಿ ನಡೆಯುತ್ತಿವೆ ಎಂಬುದು ಗಮನಿಸಬೇಕಾದ ಸಂಗತಿ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.