2026-04-28 05:44:24

7 killed in train accident in Indonesia|ಇಂಡೋನೇಷ್ಯಾದಲ್ಲಿ ರೈಲುಗಳ ನಡುವೆ ಅಪಘಾತ 7 ಮಂದಿ ಸಾವು|Speed News Kannada

 7 killed in train accident in Indonesia|ಇಂಡೋನೇಷ್ಯಾದಲ್ಲಿ ರೈಲುಗಳ ನಡುವೆ ಅಪಘಾತ 7 ಮಂದಿ ಸಾವು|Speed News Kannada

ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿದ್ದಾರೆ.ಜಕಾರ್ತಾ ಹೊರವಲಯದ ಬೆಕಾಸಿಯಲ್ಲಿ ಸೋಮವಾರ ತಡರಾತ್ರಿ ಪ್ರಯಾಣಿಕ ರೈಲು ಹಾಗೂ ಮತ್ತೊಂದು ರೈಲಿನ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಇನ್ನೂ ಹಲವು ಪ್ರಯಾಣಿಕರು ರೈಲಿನೊಳಗೆ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಲೆವೆಲ್ ಕ್ರಾಸಿಂಗ್‌ನಲ್ಲಿ ಟ್ಯಾಕ್ಸಿಯೊಂದು ಪ್ರಯಾಣಿಕರ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ರೈಲು ಹಳಿಯಲ್ಲಿ ನಿಂತಿತ್ತು. ಇದೇ ವೇಳೆಗೆ ಮತ್ತೊಂದು ರೈಲು ಬಂದು ಪ್ರಯಾಣಿಕ ರೈಲಿನ ಮಹಿಳೆಯರ ಬೋಗಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ರೈಲಿನ ಬೋಗಿಗಳು ಜಖಂಗೊಂಡು 7 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಹಲವರು ಬೋಗಿಯಲ್ಲೇ ಸಿಲುಕಿದ್ದಾರೆ. ಇಂಡೋನೇಷ್ಯಾದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಸಮಿತಿ  ಅಪಘಾತದ ತನಿಖೆ ನಡೆಸುತ್ತಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.