2026-07-23 08:18:19

7 Rajya Sabha MPs who left AAP and joined BJP | AAP ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು | Speed news kannada

7 Rajya Sabha MPs who left AAP and joined BJP | AAP ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸಂಸದರು | Speed news kannada

ಆಮ್‌ ಆದ್ಮಿ ಪಕ್ಷಕ್ಕೆ (AAP) ಬಿಗ್‌ ಶಾಕ್‌ ಎದುರಾಗಿದೆ. ರಾಘವ್‌ ಚಡ್ಡಾ ಸೇರಿದಂತೆ 7 ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಘವ್ ಚಡ್ಡಾ, ಅಶೋಕ್ ಮಿತ್ತಲ್, ಸಂದೀಪ್ ಪಾಠಕ್,  ಸೇರಿದಂತೆ 7 ರಾಜ್ಯಸಭಾ ಸಂಸದರು ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ರಾಜ್ಯಸಭಾ ಸದಸ್ಯರ ಪೈಕಿ 2/3 ಸದಸ್ಯರು ಬೆಂಬಲ ನೀಡಿರುವುದಾಗಿ ಸುದ್ದಿಗೋಷ್ಠಿಯಲ್ಲಿ ರಾಘವ್‌ ಚಡ್ಡಾ ತಿಳಿಸಿದ್ದಾರೆ. ಬಿಜೆಪಿಗೆ ಬೆಂಬಲಿಸುವ ಬಗ್ಗೆ ಕೂಡ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಎಎಪಿಗೆ ಸೇರಿದ 2/3 ಸದಸ್ಯರಾದ ನಾವು ಭಾರತದ ಸಂವಿಧಾನದ ನಿಬಂಧನೆಗಳನ್ನು ಚಲಾಯಿಸಲು ಮತ್ತು ಬಿಜೆಪಿಯೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದ್ದೇವೆ. ನಾನು ನನ್ನ ರಕ್ತ ಮತ್ತು ಬೆವರಿನಿಂದ ಪೋಷಿಸಿ, ನನ್ನ ಯೌವನದ 15 ವರ್ಷಗಳನ್ನು ನೀಡಿದ ಎಎಪಿ ತನ್ನ ತತ್ವಗಳು, ಮೌಲ್ಯಗಳು ಮತ್ತು ಮೂಲ ನೈತಿಕತೆಗಳಿಂದ ವಿಮುಖವಾಗಿದೆ. ಈಗ ಈ ಪಕ್ಷವು ರಾಷ್ಟ್ರದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಅದರ ವೈಯಕ್ತಿಕ ಲಾಭಕ್ಕಾಗಿ ಕೆಲಸ ಮಾಡುತ್ತಿದೆ ಎಂದು ರಾಘವ್‌ ಚಡ್ಡಾ ಆರೋಪಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.