ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಎಂಟು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಮೂಲದ ಕುಮಾರ್ (50), ದೀಪಿಕಾ (42) , ಸುನಿಲ್ (40) ಯಶೋಧಮ್ಮ (60), ಪುಟ್ಟಮ್ಮ (55), ಬೆಳ್ಳಿ (3), ಲೋಲಾಕ್ಷಿ ಹಾಗೂ ಮೀನಾಕ್ಷಿ ರಾಯರ ದರ್ಶನಕ್ಕಾಗಿ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. (ಏ.16) ಜಾವ 4 ಗಂಟೆ ಸುಮಾರಿಗೆ ರಾಯರ ದರ್ಶನಕ್ಕಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಈ ವೇಳೆ ಮಂತ್ರಾಲಯಕ್ಕೆ ಹೋಗುತ್ತಿದ್ದ ಬುಲೆರೋ ವಾಹನಕ್ಕೆ ಬೀದರ್‌ನಿಂದ ತುಮಕೂರಿಗೆ ಹೋಗುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು. ಪರಿಣಾಮ 8 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಗಾಯಾಳುಗಳನ್ನು ಕರ್ನೂಲು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.