2026-04-24 02:53:07

8 killed in horrific accident near Mantralaya | ಮಂತ್ರಾಲಯದ ಬಳಿ ಭೀಕರ ಅಪಘಾತ 8 ಜನ ಸಾವು | Speed news kannada

8 killed in horrific accident near Mantralaya | ಮಂತ್ರಾಲಯದ ಬಳಿ ಭೀಕರ ಅಪಘಾತ 8 ಜನ ಸಾವು | Speed news kannada

ಆಂಧ್ರಪ್ರದೇಶದ  ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಎಂಟು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಮೂಲದ ಕುಮಾರ್ (50), ದೀಪಿಕಾ (42) , ಸುನಿಲ್ (40) ಯಶೋಧಮ್ಮ (60),  ಪುಟ್ಟಮ್ಮ (55), ಬೆಳ್ಳಿ (3), ಲೋಲಾಕ್ಷಿ ಹಾಗೂ ಮೀನಾಕ್ಷಿ ರಾಯರ ದರ್ಶನಕ್ಕಾಗಿ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. (ಏ.16) ಜಾವ 4 ಗಂಟೆ ಸುಮಾರಿಗೆ ರಾಯರ ದರ್ಶನಕ್ಕಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಈ ವೇಳೆ ಮಂತ್ರಾಲಯಕ್ಕೆ ಹೋಗುತ್ತಿದ್ದ ಬುಲೆರೋ ವಾಹನಕ್ಕೆ ಬೀದರ್‌ನಿಂದ ತುಮಕೂರಿಗೆ ಹೋಗುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು. ಪರಿಣಾಮ 8 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಗಾಯಾಳುಗಳನ್ನು ಕರ್ನೂಲು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.