2026-05-24 01:11:46

ಚೀನಾ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: 82 ಕಾರ್ಮಿಕರ ಸಾವು, ಹಲವರ ಸ್ಥಿತಿ ಗಂಭೀರ | Speed News Kannada

ಚೀನಾ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: 82 ಕಾರ್ಮಿಕರ ಸಾವು, ಹಲವರ ಸ್ಥಿತಿ ಗಂಭೀರ | Speed News Kannada

ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯೊಂದರಲ್ಲಿ ಅನಿಲ ಸ್ಫೋಟ ಸಂಭವಿಸಿದ್ದು, 82 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹತ್ತು ಮಂದಿ ಕಾಣೆಯಾಗಿದ್ದಾರೆ.

ಶಾಂಕ್ಸಿ ಪ್ರಾಂತ್ಯದ ಲಿಯುಶೆನ್ಯು ಕಲ್ಲಿದ್ದಲು ಗಣಿಯಲ್ಲಿ ಈ ದುರಂತ ಸಂಭವಿಸಿದೆ. ಇನ್ನೂ ಹಲವು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆಗಳಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಚೀನಾ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.

ಸ್ಫೋಟ ಸಂಭವಿಸಿದಾಗ 247 ಕಾರ್ಮಿಕರು ಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ರಕ್ಷಣಾ ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಕೆಲವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಕಾರ್ಮಿಕರ ರಕ್ಷಣೆಗಾಗಿ ತುರ್ತು ಕಾರ್ಯಾಚರಣೆ, ಸಮಗ್ರ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅತ್ಯಂತ ವಿಷಕಾರಿ ಮತ್ತು ವಾಸನೆ ರಹಿತ ಅನಿಲವಾದ ಕಾರ್ಬನ್ ಮಾನಾಕ್ಸೈಡ್ ಮಟ್ಟವು ಗಣಿಯಲ್ಲಿ ಮಿತಿ ಮೀರಿತ್ತು. ಗಣಿಯಲ್ಲಿ ಸಿಲುಕಿರುವವರ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದೂ ಹೇಳಲಾಗುತ್ತಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.