2026-07-23 09:08:59

A 22-year-old Karnataka student missing in US | ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿದ್ದ 22 ವರ್ಷದ ಕರ್ನಾಟಕದ ವಿದ್ಯಾರ್ಥಿ ನಾಪತ್ತೆ | Speed News Kannada

A 22-year-old Karnataka student missing in US | ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿದ್ದ 22 ವರ್ಷದ ಕರ್ನಾಟಕದ ವಿದ್ಯಾರ್ಥಿ ನಾಪತ್ತೆ | Speed News Kannada

ನ್ಯೂಯಾರ್ಕ್: ಕರ್ನಾಟಕ ಮೂಲದ 24 ವರ್ಷದ ವಿದ್ಯಾರ್ಥಿ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದಾರೆ. ಸಾಕೇತ್ ಶ್ರೀನಿವಾಸಯ್ಯ ಅಮೆರಿಕಾದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ನಾಪತ್ತೆಯಾಗಿದ್ದಾರೆ. ಸಾಕೇತ್ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಲ್ಲಿ MS ಓದುತ್ತಿದ್ದರು.ಕಳೆದ ಎರಡು ದಿನಗಳಿಂದ ಅವರಿಗೆ ಯಾರೊಂದಿಗೂ ಸಂಪರ್ಕ ಸಾಧ್ಯವಾಗಿಲ್ಲ ಎಂದು ಕುಟುಂಬಸ್ಥರು ಮತ್ತು ಸ್ನೇಹಿತರು ತಿಳಿಸಿದ್ದಾರೆ.
ಸಾಕೇತ್  ಕೊನೆಯ  ಬಾರಿಗೆ  ಫೆಬ್ರವರಿ  12ರಂದು  ಕಾಣಿಸಿಕೊಂಡಿದ್ದರುಎನ್ನಲಾಗಿದ್ದು, ಆ ದಿನ ಅವರು ಕಾಲಿಫೋರ್ನಿಯಾದ ಟಿಲೈನ ರೀಜನಲ್ ಪಾರ್ಕ್‌ನಲ್ಲಿರುವ ಕೆರೆಯ ಬಳಿ ಕಂಡುಬಂದಿದ್ದರು ಎಂದು ಮಾಹಿತಿ ಇದೆ. ಆ ನಂತರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.ತಾಯಿಗೆ ಸಾಕೇತ್ ಕಾಲ್ ಮಾಡಿದ್ದರು. ಆದರೆ ವಾಪಸ್ ಕರೆ ಮಾಡಿದಾಗ ಮಗ ಪಿಕ್ ಮಾಡಿಲ್ಲ ಎಂದು ಕುಟುಂಬದವರು ಹೇಳಿದ್ದಾರೆ. ಮಗ ಸಂಪರ್ಕಕ್ಕೆ  ಸಿಗದಿರುವುದರಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಪಾರ್ಕ್ ಹಿಲ್ಸ್ ನೆರೆಹೊರೆಯ ಮನೆ ಬಾಗಿಲಿನಲ್ಲಿ ಪಾಸ್‌ಪೋರ್ಟ್ ಮತ್ತು ಲ್ಯಾಪ್ಟಾಪ್‌ನೊಂದಿಗೆ ಅವರ ಅವರ ಬ್ಯಾಗ್ ಪತ್ತೆಯಾಗಿದೆ ಎಂದು ದಿ ಬರ್ಕ್ಸಿ ಸ್ಕ್ಯಾನ‌ರ್ ಸುದ್ದಿ ಪೋರ್ಟಲ್ ವರದಿ ಮಾಡಿದೆ. ಸ್ಕ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಕಾನ್ಸುಲೇಟ್ ಅವರ ಕಣ್ಮರೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.