2026-04-24 04:14:58

A student who was dreaming of becoming a doctor died after being hit by a tipper lorry | ಡಾಕ್ಟರ್ ಕನಸು ಕಾಣುತ್ತಿದ್ದ ವಿದ್ಯಾರ್ಥಿನಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬಲಿ | Speed News Kannada

A student who was dreaming of becoming a doctor died after being hit by a tipper lorry | ಡಾಕ್ಟರ್ ಕನಸು ಕಾಣುತ್ತಿದ್ದ ವಿದ್ಯಾರ್ಥಿನಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬಲಿ | Speed News Kannada

ಚೆನ್ನಾಗಿ ಓದಿ ಡಾಕ್ಟರ್ ಆಗಬೇಕು ಅಂತ ಕನಸು ಕಂಡಿದ್ದ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದಲ್ಲಿ ನಡೆದ ಭಯಾನಕ ರಸ್ತೆ ಅಪಘಾತದಲ್ಲಿ ಒಬ್ಬ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿನಿಗೆ ಗಂಭೀರ ಗಾಯಗೊಂಡಿದೆ. ಘಟನೆ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮುಂಭಾಗದಲ್ಲಿ ನಿನ್ನೆ ಸಂಜೆ ನಡೆದಿದೆ. ಅತಿವೇಗವಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಈ ದುರಂತ ಆಪಘಾತ ಸಂಭವಿಸಿದೆ. ಅಪಘಾತದ ತೀವ್ರ ಪರಿಣಾಮದಿಂದ ಕೃತಿಕಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಂಸಗೆ ಗಂಭೀರ ಗಾಯಗಳಾಗಿವೆ. ನಿನ್ನೆ ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಈ ಅಪಘಾತ ಸಂಭವಿಸಿದೆ. ಆಕ್ಟೀವಾ ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಮೃತ ಪಟ್ಟ ವಿದ್ಯಾರ್ಥಿನಿ ಕೃತಿಕಾಗೆ (21) ವರ್ಷ ಅವರ ಸ್ನೇಹಿತೆ ಹಂಸಗೂ (21) ಆಗಿತ್ತು. ಇಬ್ಬರು ಆರ್‌ಆರ್ ನಗರದ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದರು. ಹಂಸ ಬೈಕ್ ಚಾಲನೆ ಮಾಡುತ್ತಿದ್ದರು, ಕೃತಿಕಾ ಹಿಂಬದಿಯಲ್ಲಿ ಕುಳಿತಿದ್ದರು. 
ಸದ್ಯಕ್ಕೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯುವ ಪ್ರಯತ್ನ ನಡೆಯುತ್ತಿದೆ. ಅಪಘಾತಕ್ಕೆ ಅತಿವೇಗ, ನಿರ್ಲಕ್ಷ್ಯ ಅಥವಾ ಇತರ ಕಾರಣಗಳುಇದಿಯ ಎಂದು ಪೊಲೀಸರು ಪರಿಶೀನೆಡುಸುತ್ತಿದ್ದಾರೆ. ಬೆಂಗಳೂರಿನ ಮೈಸೂರು ರಸ್ತೆಯಂತಹ ಮುಖ್ಯ ರಸ್ತೆಗಳಲ್ಲಿ ಭಾರೀ ವಾಹನಗಳು ಅತಿವೇಗದ ಪರಿಣಾಮ ಮತ್ತು ರಸ್ತೆ ಸುರಕ್ಷತೆಯ ಕೊರತೆ ಈಗಾಗಲೇ ಹಲವು ಅಪಘಾತಗಳಿಗೆ ಕಾರಣವಾಗಿದೆ. ಇದೇ ರೀತಿಯ ಅಪಘಾತಗಳು ಪದೇ ಪದೇ ನಡೆಯುತ್ತಿರುವುದರಿಂದ ರಸ್ತೆ ಸುರಕ್ಷತೆಯ ಬಗ್ಗೆ ಗಂಭೀರ ಚರ್ಚೆ ನಡೆಯಬೇಕಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.