2026-03-07 01:42:10

A student who was Going for the second PUC exam died | ದ್ವಿತೀಯ ಪಿಯುಸಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಸಾವು | Speed News Kannada

A student who was Going for the second PUC exam died | ದ್ವಿತೀಯ ಪಿಯುಸಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲೇ ಸಾವು | Speed News Kannada

ಬೆಳಗಾವಿ : ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕೋಡಿಯ ಬಂಬಲವಾಡ ಗ್ರಾಮದಲ್ಲಿ ನಡೆದಿದೆ. ಭೂಮಿಕಾ ಮಾಳಂಗಿ(17) ಹೃದಯಾಘಾತದಿಂದ ಸಾವನ್ನಪ್ಪಿದ ದುರ್ದೈವಿ. ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು, ಪರೀಕ್ಷೆಗೆ ತಯಾರಿ ನಡೆಸಿದ್ದ ಭೂಮಿಕಾಗೆ ಹೃದಯಾಘಾತ ಸಂಭವಿಸಿದೆ. ಸ್ನಾನ ಮುಗಿಸಿಕೊಂಡು ಹೊರ ಬರುತ್ತಿದ್ದ ವೇಳೆ ಹೃದಯಾಘಾತ.
ವಾಗಿದ್ದು ಕೂಡಲೇ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದದಿದ್ದಾರೆ. ಆದರೆ ಭೂಮಿಕಾ ಮಾರ್ಗ ಮಧ್ಯೆಯೇ ಅಸುನೀಗಿದ್ದಾಳೆಂದು ತಿಳಿದುಬಂದಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.