2026-06-08 03:55:22

A verbal spat between the players | ಒಳ್ಳೆ ಸ್ಪಿನ್ನರ್‌ನಂತೆ ಬೌಲಿಂಗ್ ಮಾಡ್ತಿದ್ದೀಯ. ಆಟಗಾರರ ನಡುವೆ ಮಾತಿನ ಚಕಮಕಿ | Speed News Kannada

A verbal spat between the players | ಒಳ್ಳೆ ಸ್ಪಿನ್ನರ್‌ನಂತೆ ಬೌಲಿಂಗ್ ಮಾಡ್ತಿದ್ದೀಯ. ಆಟಗಾರರ ನಡುವೆ ಮಾತಿನ ಚಕಮಕಿ | Speed News Kannada

ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ಆಟಗಾರರ ನಡುವೆ ಮಾತಿನ ಚಕಮಕಿ ಮುಂದುವರೆದಿದೆ. ಈ ಪಂದ್ಯದ ಮೊದಲ ಇನಿಂಗ್ಸ್ ವೇಳೆ ಪರಸ್ ಡೋಗ್ರಾ ಹಾಗೂ ಕೆವಿ ಅನೀಶ್ ಮೈದಾನದಲ್ಲೇ ಕಿತ್ತಾಡಿಕೊಂಡಿದ್ದರು. ಇದೀಗ ಕರ್ನಾಟಕ ವೇಗಿ ವೈಶಾಕ್ ವಿಜಯಕುಮಾ‌ರ್ ಹಾಗೂ ಜಮ್ಮು-ಕಾಶ್ಮೀರ ತಂಡದ ಆರಂಭಿಕ ದಾಂಡಿಗ ಖಮ್ರಾನ್ ಇಟ್ಬಾಲ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ನಾಲ್ಕನೇ ದಿನದಾಟದಲ್ಲಿ ಜಮ್ಮು ಮತ್ತು ಕಾಶ್ಮೀರದ ಎರಡನೇ ಇನ್ನಿಂಗ್ಸ್‌ನ 49ನೇ ಓವರ್‌ನಲ್ಲಿ ವೈಶಾಕ್ ವಿಜಯಕುಮಾರ್ ಎಸೆದ ಬೌನ್ಸರ್ ಎಸೆದಿದ್ದರು. ಈ ಎಸೆತಕ್ಕೆ ಪ್ರತ್ಯುತ್ತರ ನೀಡಲು ಖಮ್ರಾನ್‌ಗೆ ಸಾಧ್ಯವಾಗಿರಲಿಲ್ಲ. ಈ ವೇಳೆ ವೈಶಾಕ್ ಸೈಕರ್‌ನತ್ತ ಗುರಾಯಿಸುವ ಮೂಲಕ ಕೆಣಕಿದ್ದರು.
ಈ ವೇಳೆ ಖಮ್ರಾನ್ ಇಟ್ಬಾಲ್ "ಹೋಗಿ ಬೌಲಿಂಗ್ ಮಾಡು” ಎಂದು ಪ್ರತ್ಯುತ್ತರ ನೀಡಿದ್ದಾರೆ. ಇದಾಗ್ಯೂ ವೈಶಾಕ್ ವಿಜಯಕುಮಾರ್ ಗುರಾಯಿಸುವಿಕೆ ಮುಂದುವರೆಸಿದ್ದರು. ಈ ವೇಳೆ ಖಮ್ರಾನ್ ಇಟ್ಬಾಲ್, ನೀನು ಒಳ್ಳೆ ಸ್ಪಿನ್ನರ್‌ನಂತೆ ಬೌಲಿಂಗ್ ಮಾಡ್ತಿದ್ದೀಯ, ಅಷ್ಟೊಂದು ನಿಧಾನವಾಗಿದೆ ಎಂದು ಲೇವಡಿ ಮಾಡಿದ್ದಾರೆ. ಇದರಿಂದ ಕುಪಿತಗೊಂಡ ವೈಶಾಕ್ ಮತ್ತಷ್ಟು ವೇಗದಲ್ಲಿ ಚೆಂಡೆಸೆದರು ಆದರೆ ಈ ಎಸೆತದಲ್ಲಿ ಇನ್ಸಾಲ್ ಅದ್ಭುತವಾಗಿ ಸಿಕ್ಸರ್‌ಗೆ ಅಟ್ಟುವ ಮೂಲಕ ತಿರುಗೇಟು ನೀಡಿದರು. ಇದಾದ ಬಳಿಕ ಕೂಡ ಇಬ್ಬರ ನಡುವೆ ಮಾತಿನ ಚಕಮಕಿ ಮುಂದುವರೆಯಿತು. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ತಡೆಯಲು ಅಂಪೈರ್ ರೋಹನ್ ಪಂಡಿತ್ ಅವರು ಮಧ್ಯಪ್ರವೇಶಿಸಿ ಇಬ್ಬರನ್ನೂ ಸಮಾಧಾನಪಡಿಸಿದರು.
ಇನ್ನು ಈ ಪಂದ್ಯದಲ್ಲಿ ಜಮ್ಮು-ಕಾಶ್ಮೀರ ತಂಡವು ಗೆಲುವಿನತ್ತ ದಾಪುಗಾಲಿಟ್ಟಿದೆ. ಮೊದಲ ಇನಿಂಗ್ಸ್‌ನಲ್ಲಿ 584 ರನ್ ಪೇರಿಸಿದ್ದ ಕಾಶ್ಮೀರಿ ಪಡೆ ಕರ್ನಾಟಕ ತಂಡವನ್ನು ಕೇವಲ 293 ರನ್ ಗಳಿಗೆ ಆಲೌಟ್ ಮಾಡಿದ್ದರು. ಈ ಮೂಲಕ ಮೊದಲ ಇನಿಂಗ್ಸ್‌ನಲ್ಲಿ ಬರೋಬ್ಬರಿ 291 ರನ್‌ಗಳ ಮುನ್ನಡೆ ಪಡೆದುಕೊಂಡಿದೆ. ಇದಾಗ್ಯೂ ಫಾಲೋ ಆನ್ ಹೇರದೆ ಜಮ್ಮು-ಕಾಶ್ಮೀರ ತಂಡವು ದ್ವಿತೀಯ ಇನಿಂಗ್ಸ್ ಆರಂಭಿಸಿದ್ದು, ನಾಲ್ಕನೇ ದಿನದಾಟದ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಿದೆ. ಸದ್ಯ ಕ್ರೀಸ್‌ನಲ್ಲಿ ಖಮ್ರಾನ್ ಇಟ್ಬಾಲ್ ಹಾಗೂ ಸಾಹಿಲ್ ಲೋಟ ಬ್ಯಾಟಿಂಗ್ ಮುಂದುವರೆಸಿದ್ದಾರೆ.
ಇದೀಗ ಐದನೇ ದಿನದಾಟವು ನಡೆಯುತ್ತಿರುವುದರಿಂದ ಈ ಮ್ಯಾಚ್ ಡ್ರಾನಲ್ಲಿ ಕೊನೆಗೊಳ್ಳುವುದು ಖಚಿತ. ಹೀಗಾಗಿ ಮೊದಲ ಇನಿಂಗ್ಸ್ ಆಧಾರದ ಮೇಲೆ ಇದೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರ ತಂಡವು ರಣಜಿ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಲಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.