2026-06-25 04:04:17

A woman who had gone trekking to Metkal Hill drowned in the river and died | ಮೆಟ್ಕಲ್ ಗುಡ್ಡಕ್ಕೆ ಟ್ರೆಕಿಂಗ್ ಗೆಂದು ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾ*ವು | Speed News Kannada

A woman who had gone trekking to Metkal Hill drowned in the river and died | ಮೆಟ್ಕಲ್ ಗುಡ್ಡಕ್ಕೆ ಟ್ರೆಕಿಂಗ್ ಗೆಂದು ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾ*ವು | Speed News Kannada

ಕುಂದಾಪುರ : ಪರ್ವತ ಚಾರಣಕ್ಕೆ ಹೋಗಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿದ್ದಾರೆ. ಇವತ್ತು ಬೆಳಿಗ್ಗೆ ಘಟನೆ ನಡೆದಿದ್ದು ಕುಂದಾಪುರದ ಮೆಡಿಕಲ್ ಶಾಪ್ ವೊಂದರ ಮಾಲಕಿ ಶುಭಶ್ರೀ ಕಾರಂತ್ (53) ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ಕುಂದಾಪುರದಿಂದ 8-10 ಜನರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರೆಕ್ಕಿಂಗ್ ಹೋಗಿದ್ದರು ಎಂದು ತಿಳಿದು ಬಂದಿದೆ.ಮೃತದೇಹವನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆಹಾಕಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.