ಗದಗ: ಯುವಕನ ಕತ್ತು ಕೊ*ಯು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಗದಗ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ನಡೆದಿದೆ. ಮೊಹಮ್ಮದ್ ಫಾರೂಕ್ ಶೇಖ್ ಸನದಿ (25) ಕೊಲೆಯಾದ ಯುವಕ. ಈತ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹರ್ಲಾಪುರ ಗ್ರಾಮದವನಾಗಿದ್ದು, ಸದ್ಯ ಶಿಗ್ಲಿ ಗ್ರಾಮದಲ್ಲಿ ವಾಸವಿದ್ದನು. ಹಂತಕರು ಶುಕ್ರವಾರ ರಾತ್ರಿ ಯುವಕನನ್ನು ಕೊಲೆ ಮಾಡಿ ಶವವನ್ನು ಹೋಲದಲ್ಲಿ ಬಿಸಾಡಿ ಹೋಗಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿನಿಗೆ ಹೃದಯಾಘಾತ: ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ
ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕೋಡಿಯ ಬಂಬಲವಾಡ ಗ್ರಾಮದಲ್ಲಿ ನಡೆದಿದೆ. ಭೂಮಿಕಾ ಮಾಳಂಗಿ(17) ಹೃದಯಾಘಾತದಿಂದ ಸಾವನ್ನಪ್ಪಿದ ದುರ್ದೈವಿ.
ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು, ಪರೀಕ್ಷೆಗೆ ತಯಾರಿ ನಡೆಸಿದ್ದ ಭೂಮಿಕಾಗೆ ಹೃದಯಾಘಾತ ಸಂಭವಿಸಿದೆ. ಸ್ನಾನ ಮುಗಿಸಿಕೊಂಡು ಹೊರ ಬರುತ್ತಿದ್ದ ವೇಳೆ ಹೃದಯಾಘಾತ. ವಾಗಿದ್ದು ಕೂಡಲೇ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದದಿದ್ದಾರೆ. ಆದರೆ ಭೂಮಿಕಾ ಮಾರ್ಗ ಮಧ್ಯೆಯೇ ಅಸುನೀಗಿದ್ದಾಳೆಂದು ತಿಳಿದುಬಂದಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.