2026-03-10 06:51:51

Aamir Khan caught lying | ಸುಳ್ಳು ಹೇಳಿ ಸಿಕ್ಕಿಬಿದ್ದ ಆಮಿರ್ ಖಾನ್ ಟ್ರೋಲ್ ಆದ ಬಾಲಿವುಡ್ ನಟ | Speed News Kannada

Aamir Khan caught lying | ಸುಳ್ಳು ಹೇಳಿ ಸಿಕ್ಕಿಬಿದ್ದ ಆಮಿರ್ ಖಾನ್ ಟ್ರೋಲ್ ಆದ ಬಾಲಿವುಡ್ ನಟ | Speed News Kannada

ಬಾಲಿವುಡ್ ಆಮಿರ್ ಖಾನ್ ಅವರು ಪರ್ಫೆಕ್ಷನಿಸ್ಟ್ ಎನಿಸಿಕೊಂಡಿದ್ದಾರೆ. ಅವರು ಪ್ರೇಕ್ಷಕರನ್ನು ಸಾಕಷ್ಟು ಗೌರವಿಸುತ್ತಾರೆ. ಈಗ ಅವರು ಸುಳ್ಳು ಹೇಳಿ ಸಿಕ್ಕಿ ಬಿದ್ದಿದ್ದಾರೆ. 'ಸಿತಾರೆ ಜಮೀನ್‌ಪರ್' ಸಿನಿಮಾ ಈ ಮೊದಲು ಥಿಯೇಟರ್‌ನಲ್ಲಿ ರಿಲೀಸ್ ಆಯಿತು. ಆ ಬಳಿಕ ಯೂಟೂಬ್‌ನಲ್ಲಿ ರಿಲೀಸ್ ಆಯಿತು. ಈ ವೇಳೆ ಆಮಿರ್ ಖಾನ್ ಹೇಳಿದ ಸುಳ್ಳು ಈಗ ಹೊರ ಬಿದ್ದಿದೆ. ಅವರನ್ನು ಸಾಕಷ್ಟು ಟ್ರೋಲ್ ಮಾಡುತ್ತಾ ಇದ್ದಾರೆ.
ಆಮಿರ್ ಖಾನ್ ಅವರು 'ಸಿತಾರೆ ಜಮೀನ್ ಪರ್' ಸಿನಿಮಾವನ್ನು ಒಟಿಟಿಗೆ ಮಾರಾಟ ಮಾಡಲಿರಲಿಲ್ಲ. ಚಿತ್ರಮಂದಿರಗಳಲ್ಲಿ ಭಾರಿ ಹಿಟ್ ಆದ ಈ ಚಿತ್ರ ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಲಾಯಿತು. ಯೂಟ್ಯೂಬ್‌ನಲ್ಲಿ ಯಾರು ಬೇಕಾದರೂ ಕೇವಲ 100 ರೂಪಾಯಿ ನೀಡಿ ಸಿನಿಮಾ ನೋಡಬಹುದಿತ್ತು. ಒಮ್ಮೆ ಪಾವತಿಸಿದರೆ 48 ಗಂಟೆಗಳವರೆಗೆ ಈ ಚಿತ್ರ ನೋಡುವ ಅವಕಾಶ ಇತ್ತು. ಹೆಚ್ಚು ಜನರಿಗೆ ತಲುಪಬೇಕು ಎಂಬ ಕಾರಣಕ್ಕೆ ನಾವು ಈ ರೀತಿ ಮಾಡಿದ್ದೆವು ಎಂದು ಅವರು ಹೇಳಿದ್ದರು.
ಆ ಸಮಯದಲ್ಲಿ ಆಮಿರ್ ಖಾನ್ ಮಾತನಾಡಿದ್ದು ಕೇಳಿ, ಸಿನಿಮಾ ಒಟಿಟಿಗೆ ಬರೋದಿಲ್ಲ, ಅವರಿಗೆ ಜನರ ಬಗ್ಗೆ ಸಾಕಷ್ಟು ಪ್ರೀತಿ ಇದೆ ಎಂದೆಲ್ಲ ಜನರು ಅಂದುಕೊಂಡಿದ್ದರು. ಆದರೆ, ಇದು ಇದು ಸುಳ್ಳು ಎಂಬುದು ಈಗ ಗೊತ್ತಾಗಿದೆ. ಏಕೆಂದರೆ, ಸೋನಿ ಲಿವ್ ಅಲ್ಲಿ ಈ ಸಿನಿಮಾ ಪ್ರಸಾರ ಕಾಣಲಿದೆ. ದಿನಾಂಕ ಇನ್ನೂ ಫೈನಲ್ ಆಗಿಲ್ಲ. ಸದ್ಯ ಆಮಿರ್ ಖಾನ್ ಅವರನ್ನು ಎಲ್ಲರೂ ಟ್ರೋಲ್ ಮಾಡುತ್ತಿದ್ದಾರೆ. ಅವರು ನಡೆದುಕೊಂಡ ರೀತಿ ಸರಿ ಅಲ್ಲ ಎಂದು ಅನೇಕರು ಹೇಳಿದ್ದಾರೆ. ದುಡ್ಡಿಗಾಗಿ ಅವರು ಸುಳ್ಳು ಹೇಳಿದ್ದಾರೆ ಎಂದೆಲ್ಲ ಅವರು ಆರೋಪಿಸುತ್ತಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.