2026-06-25 03:39:26

Accident in Chittoor | ಚಿತ್ತೂರಿನಲ್ಲಿ ಅಪಘಾತ ಬೆಂಗಳೂರಿನ ಐವರು ಸಾವು | Speed News Kannada

Accident in Chittoor | ಚಿತ್ತೂರಿನಲ್ಲಿ ಅಪಘಾತ ಬೆಂಗಳೂರಿನ ಐವರು ಸಾವು | Speed News Kannada

ಚಿತ್ತೂರು: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ಮೂಲದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಚಿತ್ತೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಲಮನೇರು ಬಳಿ ಬೆಳಗ್ಗೆ 8.45ಕ್ಕೆ ಈ ಅಪಘಾತ ಸಂಭವಿಸಿದೆ. ಮೃತರನ್ನು ಮೋಹನ್‌ದಾಸ್ (71), ನಾಗರಾಜ್ (61) ಕುಸುಮಾ (61) ಜಯಂತಿ (59) ಪೂಜಾ (33) ಎಂದು ಗುರುತಿಸಲಾಗಿದೆ.
ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ವೇಗವಾಗಿ ಬಂದ ಕಾರು ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ಮುಂಭಾಗದಲ್ಲಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. 
ಮೃತರೆಲ್ಲರೂ ಬೆಂಗಳೂರಿನ ರಾಜಾಜಿ ನಗರದ ನಿವಾಸಿಗಳು ಎಂದು ತಿಳಿದು ಬಂದಿದ್ದು, ಇವರೆಲ್ಲರೂ  ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.