2026-03-07 07:25:49

Accident in rush to escape from Police | ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಅಪಘಾತ ಬೈಕ್ ಸವಾರ ಸಾವು, ಪತ್ನಿ ಗಂಭೀರ | Speed News Kannada

Accident in rush to escape from Police | ಪೊಲೀಸರಿಂದ ತಪ್ಪಿಸಿಕೊಳ್ಳುವ ಆತುರದಲ್ಲಿ ಅಪಘಾತ ಬೈಕ್ ಸವಾರ ಸಾವು, ಪತ್ನಿ ಗಂಭೀರ | Speed News Kannada

ಮಡಿಕೇರಿ, ಫೆಬ್ರವರಿ 19: ವಾಹನದ ಕಾಗದಪತ್ರಗಳು ಇಲ್ಲದ ಹಿನ್ನೆಲೆ ಪೊಲೀಸರನ್ನು ನೋಡಿ ಗಾಬರಿಯಾದ ಬೈಕ್ ಸವಾರ ಏಕಾಏಕಿ ವಾಹನ ತಿರುಗಿಸುವ ವೇಳೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ.
ಮರೂರು ಗ್ರಾಮದ ನಟೇಶ್ (31) ಮೃತ ವ್ಯಕ್ತಿಯಾಗಿದ್ದು, ಅವರ ಪತ್ನಿ ದಿವ್ಯಾ (30) ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದಲ್ಲಿ ದಿವ್ಯಾರ ಎರಡೂ ಕಾಲುಗಳು ಮುರಿದಿವೆ ಎನ್ನಲಾಗಿದ್ದು, ಈ ಬಗ್ಗೆ ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಪಘಾತದ ತೀವ್ರತೆಗೆ ನಜ್ಜುಗುಜ್ಜಾಗಿರುವ ವಾಹನಗಳು
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಸುಂಕಸಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಐದಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಎರಡು ಖಾಸಗಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನ ಅಂಕೋಲಾ ಹಾಗೂ ಕಾರವಾರದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಹಂಪಿಯಿಂದ ಗೋವಾ ಕಡೆ ತೆರಳುತ್ತಿದ್ದ ಸೀಬರ್ಡ ಬಸ್ ಹುಬ್ಬಳ್ಳಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಗಣೇಶ ಬಸ್ ಮತ್ತು ಯಲ್ಲಾಪುರ ಕಡೆಗೆ ಸಾಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಸರಣಿ ಅಪಘಾತದಿಂದ ಅಂಕೋಲಾ-ಹುಬ್ಬಳ್ಳಿ ಹೆದ್ದಾರಿ ಸಂಚಾರ ಕೆಲ ಕಾಲ ಬಂದ್ ಆಗಿದ್ದು, ಸ್ಥಳಕ್ಕೆ ಅಂಕೋಲಾ ಹಾಗೂ ಯಲ್ಲಾಪುರ ಪೊಲೀಸರು ಭೇಟಿ ನೀಡಿ, ಅಪಘಾತವಾದ ವಾಹನಗಳ ತೆರವು ಕಾರ್ಯಾಚರಣೆ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ, ಇಡೀ ಕುಟುಂಬವೇ ದುರಂತ ಅಂತ್ಯ ಶಾರ್ಟ್ ಸರ್ಕ್ಯೂಟ್‌ನಿಂದ ನಿಂತಿದ್ದ ಕಾರಿಗೆ ಬೆಂಕಿ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ನಿಂತಿದ್ದ ಕಾರೊಣದು ಬೆಂಕಿಗೆ ಆಗುತಿಯಾಗಿರುವ ಘಟನೆ ತಡರಾತ್ರಿ ನಡೆದಿದೆ. ಬೆಂಕಿಯ ತೀವ್ರತೆಗೆ ಕಾರಿನ ಪಕ್ಕದಲ್ಲೇ ನಿಂತಿದ್ದ ಆಟೋಗೆ ಕೂಡ ಬೆಂಕಿ ತಗುಲಿದ್ದು, ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಆರಿಸಿದ್ದಾರೆ. ಕಾರು ಬಹಳ ದಿನಗಳಿಂದ ಪಾರ್ಕಿಂಗ್ ಪ್ರದೇಶದಲ್ಲಿಯೇ ನಿಂತಿತ್ತು ಎನ್ನಲಾಗಿದ್ದು, ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.