2026-06-25 02:06:28

Accident while going to bring medicine for father|ತಂದೆಗೆ ಔಷಧಿ ತರಲು ಹೋಗಿದ್ದಾಗ ಅಪಘಾತ|Speed News Kannada

Accident while going to bring medicine for father|ತಂದೆಗೆ ಔಷಧಿ ತರಲು ಹೋಗಿದ್ದಾಗ ಅಪಘಾತ|Speed News Kannada

ಬೆಂಗಳೂರು ಬಾಗಲೂರು–ಹೆಣ್ಣೂರು ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ 16 ವರ್ಷದ ವಿದ್ಯಾರ್ಥಿ ವರುಣ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.ಬೆಳಗ್ಗೆ ಸುಮಾರು 11 ಗಂಟೆಗೆ, ತಂದೆಗೆ ಔಷಧಿ ತರಲು ಹೊರಟಿದ್ದ ವರುಣ್ ರಸ್ತೆ ದಾಟಲು ನಿಂತಿದ್ದ ವೇಳೆ ತಲೆ ಸುತ್ತಿ ಬಿದ್ದು ರಸ್ತೆಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ. ಈ ವೇಳೆ ಬಂದ ಖಾಸಗಿ ಬಸ್ ಅವನ ಮೇಲೆ ಹರಿದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಈ ದುರಂತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.ಮೃತ ವರುಣ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣನಾಗಿದ್ದ ಎಂದು ತಿಳಿದುಬಂದಿದೆ.

ಸದ್ಯ ಬಾಗಲೂರು–ಹೆಣ್ಣೂರು ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ಒಂದೇ ಮಾರ್ಗದಲ್ಲಿ ವಾಹನ ಸಂಚಾರ ನಡೆಯುತ್ತಿರುವುದರಿಂದ ಭಾರೀ ಟ್ರಾಫಿಕ್ ಉಂಟಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಘಟನೆ ಸಂಬಂಧ ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.