2026-03-07 04:58:52

Actor Raghavendra Rajkumar received his doctorate from Mantralaya | ಮಂತ್ರಾಲಯದಲ್ಲಿ ಡಾಕ್ಟರೇಟ್ ಪಡೆದ ನಟ ರಾಘವೇಂದ್ರ ರಾಜ್‌ಕುಮಾ‌ರ್ | Speed News Kannada

Actor Raghavendra Rajkumar received his doctorate from Mantralaya | ಮಂತ್ರಾಲಯದಲ್ಲಿ ಡಾಕ್ಟರೇಟ್ ಪಡೆದ ನಟ ರಾಘವೇಂದ್ರ ರಾಜ್‌ಕುಮಾ‌ರ್ | Speed News Kannada

ಕನ್ನಡದ ಹಿರಿಯ ನಟ ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾನಿಲಯದಿಂದ ಅವರಿಗೆ ಈ ಗೌರವ ನೀಡಲಾಗಿದೆ.
ಮಂತ್ರಾಲಯದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಇದನ್ನು ರಾಘವೇಂದ್ರ ಸ್ವಾಮಿಗಳ ಪಾದಕ್ಕೆ ಅರ್ಪಿಸುವೆ ಎಂದು ರಾಘವೇಂದ್ರ ರಾಜ್‌ಕುಮಾರ್ ಹೇಳಿದ್ದಾರೆ.
ಮಂತ್ರಾಲಯದಲ್ಲಿ ನಡೆದ ಗುರು ವೈಭವೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿದ್ದು, ಮಂತ್ರಾಲಯದ ಶ್ರೀಗಳಾದ ಸುಬುದೇಂಧ ತೀರ್ಥರು ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ರಾಘವೇಂದ್ರ ರಾಜ್‌ಕುಮಾ‌ರ್ ಅವರಿಗೆ ನೀಡಿದರು.
ಆ ಬಳಿಕ ಮಾತನಾಡಿದ ರಾಘವೇಂದ್ರ ರಾಜ್‌ಕುಮಾರ್, ಈ ಪದವಿ ಸಿಕ್ಕಿದ್ದು ನನ್ನ ಪುಣ್ಯ. ಅದನ್ನು ರಾಘವೇಂದ್ರ ಸ್ವಾಮೀಗಳ ಪಾದಕ್ಕೆ ಅರ್ಪಿಸುವೆ. ನಾನು ಜನಿಸಿದಾಗ, ತಂದೆ ಮಂತ್ರಾಲಯ ಸಿನಿಮಾ ಮಾಡುತ್ತಿದ್ದರು. ಆಗ ನನಗೆ ರಾಘವೇಂದ್ರ ಅಂತಾ ಹೆಸರಿಟ್ಟಿದ್ದರು. ಇದೀಗ ನಾನು ಡಾ.ರಾಘವೇಂದ್ರ ರಾಜ್‌ಕುಮಾರ್ ಆಗಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಪ್ರಶಸ್ತಿ ಸ್ವೀಕರಿಸಿದ ನಂತರ, ಜವಾಬ್ದಾರಿ, ಭಯ ಹೆಚ್ಚಾಗಿದೆ. ಏನು ಸಾಧನೆ ಮಾಡದವನಿಗೆ ಈ ಪ್ರಶಸ್ತಿ ಯಾಕೆ ಅಂತಾ ಅನ್ನಿಸುತ್ತದೆ. ದೇವರ ಆಶೀರ್ವಾದದಿಂದ ಇದು ನನಗೆ ಸಿಕ್ಕಿದೆ ಎಂದು ನಾನು ತಿಳಿದಿದ್ದೇನೆ. ನನ್ನ ತಂದೆ ತಾಯಿ ಆಶೀರ್ವಾದ ಮಾಡಿ, ಈ ಗೌರವ ಕ"ಡಿಸಿದಂತಾಗಿದೆ. ಇನ್ನು ಮುಂದೆ ನಾನು ಸಮಾಜದ ಜನರ ಜತೆ ಬೆರೆತು ಸೇವೆ ಮಾಡುತ್ತೇನೆ ಎಂದು ರಾಘವೇಂದ್ರ ರಾಜ್‌ಕುಮಾ‌ರ್ ಹೇಳಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.