2026-06-25 02:04:55

Actress blackmailed by making private video | ಮಹಿಳಾ ಸೆಲಬ್ರೆಟಿ ಕ್ರಿಕೆಟ್ ಟೂರ್ನಿಯಲ್ಲಿ ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ | Speed News Kannada

Actress blackmailed by making private video | ಮಹಿಳಾ ಸೆಲಬ್ರೆಟಿ ಕ್ರಿಕೆಟ್ ಟೂರ್ನಿಯಲ್ಲಿ ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ | Speed News Kannada

ಬೆಂಗಳೂರು: ಕನ್ನಡಗ ನಟಿಯೊಬ್ಬರ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಪ್ರಕರಣ ಬೆಂಗಳೂರಿಲ್ಲಿ ನಡೆದಿದೆ..
ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಮಹಿಳಾ ಸೆಲೆಬ್ರೆಟಿ ಕ್ರಿಕೆಟ್ ಟೂರ್ನಿಯಲ್ಲಿ ಈ ವಿಡಿಯೋ ರೆಕಾರ್ಡ್ ಮಾಡಲಾಗಿದೆ.
ನಟಿ ಬಾತ್‌ರೂಮ್‌ನಲ್ಲಿದ್ದಾಗ ಅಪರಿಚಿತ ಈ ವಿಡಿಯೋ ಮಾಡಿದ್ದಾನೆ. ಬಳಿಕ ಇನ್ಸಾ ಅಕೌಂಟ್‌ನಿಂದ ಆಕೆಯ ಸ್ನೇಹಿತೆಯ ಅಕೌಂಟ್‌ಗೆ ನಾಲ್ಕಾರು ವೀಡಿಯೋಗಳನ್ನು ಕಳಿಸಿದ್ದ. ವಿಡೀಯೋ ಪಬ್ಲಿಕ್ ಮಾಡಬಾರದೆಂದರೆ ಇಂತಿಷ್ಟು ಹಣ ಕೊಡಬೇಕು ಎಂದು ಬೇಡಿಕೆ ಇಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.
ವಿಡಿಯೋ ಕಾಲ್ ಮಾಡುವ ಮೂಲಕ ಮೂರ್ನಾಲ್ಕು ಬಾರಿ ಬ್ಲಾಕ್‌ಮೇಲ್ ಮಾಡಿದ್ದಾನೆ. ಹಣ ನೀಡದೇ ಹೋದ್ರೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಸಿಟಿ ಸೆನ್ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾಳೆ.
ಈ ಸಂಬಂಧ ಸಂತ್ರಸ್ತೆ ದೂರು ದಾಖಲು ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಪರಿಚಿತ ವ್ಯಕ್ತಿ ಈ ಕೃತ್ಯ ನಡೆಸಿದ್ದು, ಆತನಿಗಾಗಿ ಹುಡುಕಾಟ ಮುಂದುವರಿದಿದೆ. ದೂರಿನ ಅನ್ವಯ ಆರೋಪಿ ವಿರುದ್ಧ ಐಟಿ ಆಕ್ಟ್ ಮತ್ತು ಬಿಎನ್‌ಎಸ್ 77, 351 ಮತ್ತು 308 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.