ಬಾಲಿವುಡ್‌ನ ಖ್ಯಾತ ನಟಿ ಮೌನಿ ರಾಯ್ ಹಾಗೂ ಉದ್ಯಮಿ ಸೂರಜ್ ನಂಬಿಯಾರ್ ಅವರ ವೈವಾಹಿಕ ಜೀವನದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ. ಹಲವು ವರ್ಷಗಳ ಕಾಲ ಪ್ರೀತಿಸಿ, 2022ರಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದ ಈ ಜೋಡಿ ಈಗ ವಿಚ್ಛೇದನದ ಹಾದಿಯಲ್ಲಿದ್ದಾರೆಯೇ ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಇದಕ್ಕೆ ಪ್ರಮುಖ ಕಾರಣ ಈ ಜೋಡಿ ಇನ್ಸಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿರುವುದು. ಅನುಮಾನ ಮೂಡಿಸಿದ ಇನ್ನಾ ಗ್ರಾಮ್ ನಡೆ ಸಾಮಾನ್ಯವಾಗಿ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಮೌನಿ ರಾಯ್, ಪತಿ ಸೂರಜ್ ಜೊತೆಗಿನ ಪ್ರವಾಸ ಹಾಗೂ ಡೇಟಿಂಗ್ ಫೋಟೋಗಳನ್ನು ಅಪ್‌ಲೋಡ್ ಮಾಡುತ್ತಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಅವರು ಯಾವುದೇ ಫೋಟೋ ಹಂಚಿಕೊಂಡಿಲ್ಲ. ಇದಕ್ಕಿಂತಲೂ ಹೆಚ್ಚಾಗಿ, ಇಬ್ಬರೂ ಈಗ ಇನ್‌ಸ್ಟಾಗ್ರಾಮ್‌ನಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿಲ್ಲ ಎಂಬುದು ಅಭಿಮಾನಿಗಳ ಗಮನಕ್ಕೆ ಬಂದಿದೆ. ಅಷ್ಟೇ ಅಲ್ಲದೆ, ಈ ಹಿಂದೆ ನೂಪುರ್ ಸನೋನ್ ಮದುವೆಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದ ಫೋಟೋಗಳನ್ನು ಸಹ ಈಗ ಡಿಲೀಟ್ ಮಾಡಿರುವುದು ಈ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದೆ.
ಮೌನಿ ಮತ್ತು ಸೂರಜ್ 2022ರ ಜನವರಿ 27 ರಂದು ಗೋವಾದಲ್ಲಿ ಮಲಯಾಳಿ ಮತ್ತು ಬಂಗಾಳಿ ಸಂಪ್ರದಾಯದಂತೆ ಮದುವೆಯಾಗಿದ್ದರು. ಸೂರಜ್ ನಂಬಿಯಾರ್ ದುಬೈ ಮೂಲದ ಹೂಡಿಕೆ ಬ್ಯಾಂಕರ್ ಮತ್ತು ಉದ್ಯಮಿಯಾಗಿದ್ದಾರೆ. ಪ್ರಸ್ತುತ ಹರಡುತ್ತಿರುವ ಈ ವಿಚ್ಛೇದನದ ಸುದ್ದಿಯ ಬಗ್ಗೆ, ದಂಪತಿಗಳಿಬ್ಬರೂ ಈವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇರುವ ಮೌನಿ ವೈಯಕ್ತಿಕ ಜೀವನದ ಏರಿಳಿತಗಳ ನಡುವೆಯೇ ಮೌನಿ ರಾಯ್ ತಮ್ಮ ವೃತ್ತಿಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಡೇವಿಡ್ ಧವನ್ ನಿರ್ದೇಶನದ, ವರುಣ್ ಧವನ್ ಅಭಿನಯದ 'ಹೈ ಜವಾನಿ ತೋ ಇಶ್ ಹೋನಾ ಹೈ' ಸಿನಿಮಾ ಜೂನ್ 5 ರಂದು ಬಿಡುಗಡೆಯಾಗಲಿದೆ. ಇದರ ಜೊತೆಗೆ ಮೆಗಾಸ್ಟಾರ್ ಚಿರಂಜೀವಿ ಅಭಿನಯದ 'ವಿಶ್ವಂಭರ' ಚಿತ್ರದಲ್ಲೂ ಮೌನಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.