2026-06-08 01:23:45

Actress Sapthami Gowda Angry | ಅಸಭ್ಯವಾಗಿ ವಿಡಿಯೊ ಚಿತ್ರೀಕರಿಸಿದವರ ವಿರುದ್ಧ ನಟಿ ಸಪ್ತಮಿ ಗೌಡ ಗರಂ | Speed News Kannada

Actress Sapthami Gowda Angry | ಅಸಭ್ಯವಾಗಿ ವಿಡಿಯೊ ಚಿತ್ರೀಕರಿಸಿದವರ ವಿರುದ್ಧ ನಟಿ ಸಪ್ತಮಿ ಗೌಡ ಗರಂ | Speed News Kannada

ಇತ್ತೀಚೆಗೆ ಕೆಲವರು ನಟಿಯರ ವಿಡಿಯೊ ಹಾಗೂ ಫೋಟೊಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವುದು ಹೆಚ್ಚಾಗಿದೆ. ಅಂತಹವರ ವಿರುದ್ಧ ಕಾಂತಾರ ಸಿನಿಮಾದ ನಟಿ ಸಪ್ತಮಿ ಗೌಡ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ, 'ಕೆಟ್ಟ ಅನುಭವವನ್ನು ಎದುರಿಸಿದ ಪ್ರತಿಯೊಬ್ಬ ಮಹಿಳೆಯೊಂದಿಗೂ ನಾವು ಐಕ್ಯತೆಯಲ್ಲಿ ನಿಂತಿದ್ದೇವೆ. ಗೌರವವನ್ನು ಬೇಡುವ ನಮ್ಮ ಧ್ವನಿ ಮುಂದುವರೆಯುತ್ತದೆ' ಎಂದು ಸುಧೀರ್ಘವಾಗಿ ಬರೆದುಕೊಂಡಿದ್ದಾರೆ ಸಪ್ತಮಿ ಗೌಡ. 
'ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೊಗಳು ಮತ್ತು ಫೋಟೊಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ, ನಮ್ಮ ಕಲೆಗಿಂತ ನಮ್ಮ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್ ಮಾಡಿ ಪ್ರಸಾರ ಮಾಡುವ ಘಟನೆಗಳು ಪುನಃ ಪುನಃ ನಡೆಯುತ್ತಿವೆ. ಇಂತಹ ವರ್ತನೆ ಕೆಲವರಿಂದ ನಡೆಯುತ್ತಿರುವುದಾದರೂ, ಇದು ಅವಮಾನಕಾರಿ ಮತ್ತು ಸ್ವೀಕಾರಾರ್ಹವಲ್ಲ' ಎಂದರು.
'ನಾವು ಇಲ್ಲಿ ನಮ್ಮ ಕಲೆಗಾಗಿ ಬಂದಿದ್ದೇವೆ. ನಾವು ಇಲ್ಲಿ ನಮ್ಮ ಸಿನಿಮಾಕ್ಕಾಗಿ ಬಂದಿದ್ದೇವೆ. ಉದ್ದೇಶಪೂರ್ವಕವಾಗಿ ಜೂಮ್ ಮಾಡುವುದು ಮತ್ತು ಅಸಭ್ಯ ಚಿತ್ರೀಕರಿಸುವುದು ನಮ್ಮ ಗೌರವಕ್ಕೆ ಧಕ್ಕೆಯಾಗುತ್ತದೆ. ಇದನ್ನು ಸಾಮಾನ್ಯವೆಂದು ಸ್ವೀಕರಿಸುವುದಿಲ್ಲ, ಸಹಿಸುವುದಿಲ್ಲ. ಕಾರ್ಯಕ್ರಮಗಳನ್ನು ವರದಿ ಮಾಡುವವರು ವೃತ್ತಿಪರತೆ, ಮೂಲಭೂತ ಗೌರವ ಮತ್ತು ಶಿಸ್ತನ್ನು ಕಾಪಾಡಬೇಕು ಎಂದು ನಾವು ನಿರೀಕ್ಷಿಸುತ್ತೇವೆ. ಈ ಗಡಿರೇಖೆಯನ್ನು ಸ್ಪಷ್ಟವಾಗಿ ಎಳೆದು, ನಾವು ಒಟ್ಟಾಗಿ ನಿಂತಿದ್ದೇವೆ. ಇಂತಹ ಅನುಭವವನ್ನು ಎದುರಿಸಿದ ಪ್ರತಿಯೊಬ್ಬ ಮಹಿಳೆಯೊಂದಿಗೂ ನಾವು ಐಕ್ಯತೆಯಲ್ಲಿ ನಿಂತಿದ್ದೇವೆ. ಗೌರವವನ್ನು ಬೇಡುವ ನಮ್ಮ ಧ್ವನಿ ಮುಂದುವರೆಯುತ್ತದೆ' ಎಂದಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.