2026-03-07 06:29:30

Again Bus Strike | ಮತ್ತೆ ಬಸ್‌ ಬಂದ್‌? ಸರ್ಕಾರದ ವಿರುದ್ಧ ಸಾರಿಗೆ ನೌಕರು ಹೋರಾಟಕ್ಕೆ ಫಿಕ್ಸ್‌? | Speed News Kannada

Again Bus Strike | ಮತ್ತೆ ಬಸ್‌ ಬಂದ್‌?  ಸರ್ಕಾರದ ವಿರುದ್ಧ ಸಾರಿಗೆ ನೌಕರು ಹೋರಾಟಕ್ಕೆ ಫಿಕ್ಸ್‌?  | Speed News Kannada

ಬೆಂಗಳೂರು : ಕರ್ನಾಟಕದ ನಾಲ್ಕು ರಸ್ತೆ ಸಾರಿಗೆ ನಿಗಮ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂ ನೌಕರರು ಸರ್ಕಾರದ ವಿರುದ್ಧ ಮತ್ತೆ ಧ್ವನಿ ಎತ್ತಿದ್ದಾರೆ. ಜಂಟಿ ಕ್ರಿಯಾ ಸಮಿತಿ ಜೆಎಸಿ ನೇತೃತ್ವದಲ್ಲಿ ಮತ್ತೆ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ. 
ಕಳೆದ ತಿಂಗಳು ಪ್ರತಿಭಟನೆಗೆ ಕರೆ ನೀಡಿದ್ದ ನೌಕರರು ಮತ್ತೆ ಇದೀಗ ಈ ತಿಂಗಳಲ್ಲೇ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಜೊತೆಗೆ ಆ ಸಾರಿಗೆ ಬಂದ್ ಮಾಡುವ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಜನವರಿ 29ರಂದು ನಿಗದಿಯಾಗಿದ್ದ ಹೋರಾಟವನ್ನು ಎಚ್.ವಿ. ಅನಂತ್ ಸುಬ್ಬರಾವ್ ಅವರ ನಿಧನದಿಂದಾಗಿ ಮುಂದೂಡಲಾಗಿತ್ತು. ಈಗ ಫೆಬ್ರವರಿಯ ಮೂರನೇ ವಾರದಲ್ಲಿ ಹೋರಾಟ ಮುಂದುವರೆಯಲಿದೆ ಎಂದು ಕರೆ ನೀಡಿದ್ದಾರೆ. ನೌಕರರ ಮುಖ್ಯ ಬೇಡಿಕೆಗಳು ಈಡೇರಿದಿದ್ದರೆ ಬಸ್‌ ಬಂದ್‌ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಅವರಿಗೆ 38 ತಿಂಗಳ ವೇತನ ಹಿಂಬಾಕಿ ಮತ್ತು 2024 ಜನವರಿ 1ರಿಂದ ಹೊಸ ವೇತನ ಪರಿಷ್ಕರಣೆ ಜಾರಿಯಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.