2026-04-24 12:23:22

AI posts picture of patient being treated|ಫೋಟೋ ವೈರಲ್ ಮಾಡಿ ನಿಶ್ಚಿತಾರ್ಥ ಕ್ಯಾನ್ಸಲ್ ಮಾಡಿಸಿದ ಪ್ರೇಮಿ|Speed News Kannada

AI posts picture of patient being treated|ಫೋಟೋ ವೈರಲ್ ಮಾಡಿ ನಿಶ್ಚಿತಾರ್ಥ ಕ್ಯಾನ್ಸಲ್ ಮಾಡಿಸಿದ ಪ್ರೇಮಿ|Speed News Kannada

ಹದಿಹರೆಯದ ಪ್ರೇಮ ಪ್ರಕರಣಗಳು ಕೆಲವೊಮ್ಮೆ ದುರಂತ ಅಂತ್ಯ ಕಾಣುತ್ತವೆ. ವಿಜಯಪುರ ಜಿಲ್ಲೆಯಲ್ಲಿ ಪ್ರೇಮ ವಿಚಾರವೇ ಯುವತಿಯ ಜೀವಕ್ಕೆ ಕಾರಣವಾದ ಹೃದಯ ವಿದ್ರಾವಕ ಘಟನೆ ನಡೆದಿದೆ. ಮದುವೆ ನಿಶ್ಚಯವಾಗಿದ್ದ ಯುವತಿಯ ಬದುಕು, ಪ್ರೇಮಿಯ ಅತಿರೇಕಿ ನಡೆದಿಂದ ದುರ್ಘಟನೆಯಾಗಿ ಕೊನೆಗೊಂಡಿದೆ.ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. 22 ವರ್ಷದ ಜಯಶ್ರೀ ಬಿರಾದಾರ್ ಎಂಬ ಯುವತಿಗೆ ಕುಟುಂಬಸ್ಥರು ಮದುವೆ ನಿಶ್ಚಯ ಮಾಡಿದ್ದು, ನಿಶ್ಚಿತಾರ್ಥವೂ ನೆರವೇರಿಸಿದ್ದರು. ಏಪ್ರಿಲ್ 27ರಂದು ಮದುವೆ ನಡೆಯಬೇಕಾಗಿತ್ತು.

ಜಯಶ್ರೀ ಮತ್ತು ತನ್ನ ನಡುವಿನ ಖಾಸಗಿ ಫೋಟೋಗಳನ್ನು, ಮದುವೆ ನಿಶ್ಚಯವಾಗಿದ್ದ ಯುವಕನ ಕುಟುಂಬಸ್ಥರಿಗೆ ಕಳುಹಿಸಿದ್ದಾನೆ. ಇದರಿಂದ ಆಘಾತಗೊಂಡ ವರಪಕ್ಷ, ಮದುವೆಯನ್ನು ರದ್ದುಪಡಿಸಿದೆ.ಈ ಬೆಳವಣಿಗೆಯಿಂದ ತೀವ್ರವಾಗಿ ನೊಂದ ಜಯಶ್ರೀ, ಗ್ರಾಮದ ಮದಿನಾ ಮಸೀದಿ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಬಳಿಕ ಶವವನ್ನು ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಮನೆ ಮಗಳ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರೇಮಿಯ ಕೃತ್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿರುವ ಕುಟುಂಬಸ್ಥರು, ಆರೋಪಿಯಾದ ಶ್ರೀಶೈಲ್ ಬಡಾನೂರ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.ಪ್ರೇಮ ಸಂಬಂಧಗಳಲ್ಲಿ ಅತಿರೇಕಿ ನಡೆ ಎಷ್ಟು ಅಪಾಯಕಾರಿಯಾಗಬಹುದು ಎಂಬುದಕ್ಕೆ ಈ ಘಟನೆ ಮತ್ತೊಂದು ಉದಾಹರಣೆ. ಇಂತಹ ಸಂದರ್ಭಗಳಲ್ಲಿ ಸಂಯಮ ಮತ್ತು ಜವಾಬ್ದಾರಿಯುತ ನಡೆ ಅತ್ಯವಶ್ಯಕ

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.