ನ್ಯೂಯಾರ್ಕ್ನ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ವಿಮಾನ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ವಿಮಾನ ನಿಲ್ದಾಣದ ರನ್‌ವೇ 4 ರಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್ ಮತ್ತು ಅಗ್ನಿಶಾಮಕ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ ಎನ್ನಲಾಗಿದೆ. ಕೆನಡಾದ ಮಾಂಟ್ರಿಯಲ್‌ನಿಂದ ಬರುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ಸಿಆರ್‌ಜೆ -900 ವಿಮಾನವು ರನ್‌ವೇ 4 ರಲ್ಲಿ ಲ್ಯಾಂಡ್ ಆಗಿತ್ತು. ಈ ವೇಳೆ ರನ್ ವೇ ನಲ್ಲೇ ಫೈರ್ ಟ್ರಕ್‌ಗೆ ವಿಮಾನ ಡಿಕ್ಕಿಯಾಗಿದೆ. ಈ ಅವಘಡದ ಬಳಿಕ ಒಳ ಬರುವ ವಿಮಾನಗಳಿಗೆ ಏರ್‌ಪೋರ್ಟ್ ಮುಚ್ಚಲಾಗಿದೆ. ವಿಮಾನ ಅಪಘಾತದ ಬಳಿಕ ರಕ್ಷಣಾ ಕಾರ್ಯಾಚರಣೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ. ವೀಡಿಯೋದಲ್ಲಿ ವಿಮಾನದ ಮುಂಭಾಗಕ್ಕೆ ಹಾನಿಯಾಗಿರುವುದು ಕಾಣಿಸುತ್ತದೆ.