2026-04-24 12:15:45

Air Canada flight crash | ಟ್ರಕ್‌ಗೆ ಡಿಕ್ಕಿ ಹೊಡೆದ ಏರ್‌ ಕೆನಡಾ ವಿಮಾನ | Speed News Kannada

Air Canada flight crash | ಟ್ರಕ್‌ಗೆ ಡಿಕ್ಕಿ ಹೊಡೆದ ಏರ್‌ ಕೆನಡಾ ವಿಮಾನ | Speed News Kannada

ನ್ಯೂಯಾರ್ಕ್​ನ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ವಿಮಾನ ಟ್ರಕ್​ಗೆ ಡಿಕ್ಕಿ ಹೊಡೆದಿದೆ. ವಿಮಾನ ನಿಲ್ದಾಣದ ರನ್‌ವೇ 4 ರಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್ ಮತ್ತು ಅಗ್ನಿಶಾಮಕ ಟ್ರಕ್​ಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ ಎನ್ನಲಾಗಿದೆ. ಕೆನಡಾದ ಮಾಂಟ್ರಿಯಲ್‌ನಿಂದ ಬರುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ಸಿಆರ್‌ಜೆ -900 ವಿಮಾನವು ರನ್‌ವೇ 4 ರಲ್ಲಿ ಲ್ಯಾಂಡ್‌ ಆಗಿತ್ತು. ಈ ವೇಳೆ ರನ್‌ ವೇ ನಲ್ಲೇ ಫೈರ್‌ ಟ್ರಕ್‌ಗೆ ವಿಮಾನ ಡಿಕ್ಕಿಯಾಗಿದೆ. ಈ ಅವಘಡದ ಬಳಿಕ ಒಳ ಬರುವ ವಿಮಾನಗಳಿಗೆ ಏರ್‌ಪೋರ್ಟ್‌ ಮುಚ್ಚಲಾಗಿದೆ. ವಿಮಾನ ಅಪಘಾತದ ಬಳಿಕ ರಕ್ಷಣಾ ಕಾರ್ಯಾಚರಣೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ. ವೀಡಿಯೋದಲ್ಲಿ ವಿಮಾನದ ಮುಂಭಾಗಕ್ಕೆ ಹಾನಿಯಾಗಿರುವುದು ಕಾಣಿಸುತ್ತದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.