2026-05-26 12:04:43

ನಾನು ರಾಜ್ಯಸಭಾ ಸ್ಥಾನದ ಆಕಾಂಕ್ಷಿ: ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ | Speed News Kannada

ನಾನು ರಾಜ್ಯಸಭಾ ಸ್ಥಾನದ ಆಕಾಂಕ್ಷಿ: ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ | Speed News Kannada

ಮೈಸೂರು: ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನಾನೂ ಆಕಾಂಕ್ಷಿಯಾಗಿದ್ದೆನೆ. ಚುನಾವಣಾ ರಾಜಕೀಯದಿಂದ ದೂರ ಉಳಿದಿರುವ ನಾನು ರಾಜ್ಯಸಭೆ ಅಥವಾ ಬೇರೆ ಯಾವುದೇ ಸ್ಥಾನಮಾನ ನೀಡಿದರೆ ನಿಭಾಯಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ಇಂದು ಇಲ್ಲಿ ಮಾತನಾಡಿಇದ ಅವರು, ರಾಜ್ಯದಿಂದ ಒಬ್ಬರು ಬಿಜೆಪಿಯಿಂದ ಆಯ್ಕೆಯಾಗುವ ಅವಕಾಶ ಇದೆ. ಯಾರನ್ನು ರಾಜ್ಯಸಭೆಗೆ ಕಳುಹಿಸಬೇಕು ಎನ್ನುವುದನ್ನು ರಾಷ್ಟ್ರೀಯ ನಾಯಕರು ತೀರ್ಮಾನಿಸುತ್ತಾರೆ ಎಂದರು. ‌

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿ ಅವರು, ಬಿಜೆಪಿಯಲ್ಲಿ ಅಧ್ಯಕ್ಷರ ಬದಲಾವಣೆ ಪ್ರಸ್ತಾಪ ಇಲ್ಲ. ಈಗ ಅವರು ಎರಡು ವರ್ಷ ಮುಗಿಸಿದ್ದು, ಇನ್ನೊಂದು ವರ್ಷದಲ್ಲಿ ಅವಧಿಯೇ ಮುಗಿಯುತ್ತದೆ. ಬಿಜೆಪಿ ಎಲ್ಲಾ ಕಡೆ ಜಯಭೇರಿ ಭಾರಿಸುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್‌ ಎಸ್‌ಐಆರ್‌ಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್‌ ತನಗೆ ಕೊಟ್ಟ ಜವಬ್ದಾರಿ ನಿರ್ವಹಿಸಲಾಗದೆ,  ಜನರ ದಿಕ್ಕು ತಪ್ಪಿಸುತ್ತಿದೆ. ಎಸ್‌ಐಆರ್‌ ಬಗ್ಗೆ ಸುಳ್ಳು ಹರಡುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್‌ ಸರ್ಕಾರದ ಹಿಂದೂ ವಿರೋಧಿ ಧೋರಣೆಯಿಂದ ಜನ ಬೇಸತ್ತಿದ್ದು, ಈಗ ಚುನಾವಣೆ ನಡೆದರೂ ಕಾಂಗ್ರೆಸ್‌ ಐವತ್ತು ಸ್ಥಾನಕ್ಕಿಂತ ಕೆಳಗಿಳಿಯಲಿದೆ ಎಂದರು.

ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ ಜಾಗತಿಕ ಸಮಸ್ಯೆಯಾಗಿದೆ. ಆದರೂ ಬೆಲೆ ಏರಿಕೆಯನ್ನು ಹತೋಟಿಯಲ್ಲಿಡಲಾಗಿದೆ. ಹೀಗಾಗಿ ಪೆಟ್ರೋಲ್‌, ಡಿಸೇಲ್‌ ಬೆಲೆ ಹೆಚ್ಚಿದೆ. ಆದರೂ ಯಾರಿಗೂ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಉತ್ತರಿಸಿದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.