2026-04-24 02:54:53

Another love jihad case comes to light in Hubballi |ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ|Speed News Kannada

Another love jihad case comes to light in Hubballi |ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ|Speed News Kannada

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಆತಂಕ ಮೂಡಿಸುತ್ತಿವೆ. ಜಿಮ್ ಟ್ರೈನರ್ ಪ್ರಕರಣದ ಬೆನ್ನಲ್ಲೇ ಮತ್ತೊಂದು ಗಂಭೀರ ಆರೋಪ ಹೊರಬಂದಿದೆ.ಹುಬ್ಬಳ್ಳಿಯಲ್ಲಿ ಯುವತಿಯ ಮೇಲೆ ಅತ್ಯಾಚಾರ ಹಾಗೂ ಬ್ಲ್ಯಾಕ್‌ಮೇಲ್ ಆರೋಪ ಸಂಬಂಧ ಮತ್ತೊಂದು ಪ್ರಕರಣ ದಾಖಲಾಗಿದೆ. ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದು, ಆರೋಪಿ ಮುಫೀಸ್ ಮಿಯಾನ್ನವರ್ ವಿರುದ್ಧ ಪ್ರಕರಣ ದಾಖಲಾಗಿದೆ.


ಪರಿಚಯ ಕಾರ್ಯಕ್ರಮದ ವೇಳೆ ಯುವತಿ ಮತ್ತು ಆರೋಪಿಯ ನಡುವೆ ಪರಿಚಯ ಬೆಳೆದಿತ್ತು. ನಂತರ ಪ್ರೀತಿಯ ನಾಟಕವಾಡಿದ ಆರೋಪಿ, ಗದಗ ರಸ್ತೆಯ ಸಮೀಪಕ್ಕೆ ಕರೆದುಕೊಂಡು ಹೋಗಿ ಯುವತಿಯ ವಿರೋಧದ ನಡುವೆಯೂ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.ಅಲ್ಲದೆ, ಘಟನೆ ದೃಶ್ಯಗಳನ್ನು ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾನೆ ಎನ್ನಲಾಗಿದೆ.

ಈ ವಿಷಯ ಯಾರಿಗೂ ಹೇಳಿದರೆ ಜೀವ ಬೆದರಿಕೆ ಹಾಕಿ, ಹಲವಾರು ಬಾರಿ ದೌರ್ಜನ್ಯ ಎಸಗಿದ್ದಾನೆ ಎಂದು ಯುವತಿ ದೂರಿನಲ್ಲಿ ಹೇಳಿದ್ದಾಳೆ.2025ರಲ್ಲಿ ಯುವತಿಯನ್ನು ಬಲವಂತವಾಗಿ ಮದುವೆಗೆ ಒತ್ತಾಯಿಸಿ, ಧಾರವಾಡದಲ್ಲಿ ರಿಜಿಸ್ಟರ್ ಮದುವೆ ಮಾಡಲು ಸಿದ್ಧತೆ ನಡೆಸಿದ್ದಾನೆ. ಆದರೆ ಕುಟುಂಬದವರು ಮಧ್ಯಪ್ರವೇಶಿಸಿ ಮದುವೆ ತಡೆದಿದ್ದಾರೆ.


ಮನೆಯಲ್ಲಿ ಯಾರೂ ಇಲ್ಲದ ವೇಳೆ ಮತ್ತೊಮ್ಮೆ ಅತ್ಯಾಚಾರ ನಡೆಸಿ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ.ಇತ್ತೀಚೆಗೆ ಬೆಳಕಿಗೆ ಬಂದ ಜಿಮ್ ಟ್ರೈನರ್ ಪ್ರಕರಣದ ನಂತರ ಧೈರ್ಯಗೊಂಡ ಯುವತಿ ಇದೀಗ ದೂರು ನೀಡಿದ್ದಾಳೆ.ಘಟನೆ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರಕರಣ ರಾಜ್ಯದ ಗಮನ ಸೆಳೆದಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.