2026-03-07 07:07:22

Another murder in Bengaluru | ಬೆಂಗಳೂರಲ್ಲಿ ಮತ್ತೊಂದು ಮರ್ಡರ್ ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಪತಿ | Speed News Kannada

Another murder in Bengaluru | ಬೆಂಗಳೂರಲ್ಲಿ ಮತ್ತೊಂದು ಮರ್ಡರ್ ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಪತಿ | Speed News Kannada

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆಯಾಗಿದ್ದು ಮಚ್ಚಿನಿಂದ ಕೊಚ್ಚಿ ಪತಿ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಕೊಲೆ ನಡೆದಿದೆ. ಮಚ್ಚಿನಿಂದ ಕೊಚ್ಚಿ ದೇವಿಕ (50) ಪತ್ನಿಯನ್ನು ಪತಿ ಕುಮಾರ್ ಕೊಲೆ ಕೊಲೆ ಮಾಡಿದ್ದಾನೆ.
ಇತ್ತೀಚಿಗೆ ಕುಟುಂಬದ ಸಮೇತ ಕೇರಳ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಚಾಲಕನ ಜೊತೆಗೆ ಪತ್ನಿ ಮಾತನಾಡಿದ್ದಕ್ಕೆ ಅನುಮಾನ ವ್ಯಕ್ತಪಡಿಸಿದ್ದಾನೆ. ಪತ್ನಿಯ ಮೇಲೆ ಅನುಮಾನ ಹೊಂದಿದ್ದ ಆರೋಪಿ ಪತಿ ಕುಮಾರ್ ನಿನ್ನೆ ರಾತ್ರಿ ಮಲಗಿದ ವೇಳೆ ಮಚ್ಚಿನಿಂದ ಕೊಚ್ಚಿ ದೇವಿಕಾಳನ್ನು ಕೊಲೆ ಮಾಡಿದ್ದಾನೆ ಬಳಿಕ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಆರೋಪಿ, ಕುಮಾರ್ನನ್ನು ಮಕ್ಕಳು ತಡೆದಿದ್ದಾರೆ ಸದ್ಯ ಕೊಲೆ ಆರೋಪಿ ಕುಮಾರರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.