2026-04-24 04:09:10

Another victim of online game addiction in the state MBBS student hanged | ರಾಜ್ಯದಲ್ಲಿ ಆನೈನ್ ಗೇಮ್ ಚಟಕ್ಕೆ ಮತ್ತೊಂದು ಬಲಿ ಬೀದರ್ ನಲ್ಲಿ MBBS ವಿದ್ಯಾರ್ಥಿ ನೇಣಿಗೆ ಶರಣು! | Speed News Kannada

Another victim of online game addiction in the state MBBS student hanged | ರಾಜ್ಯದಲ್ಲಿ ಆನೈನ್ ಗೇಮ್ ಚಟಕ್ಕೆ ಮತ್ತೊಂದು ಬಲಿ ಬೀದರ್ ನಲ್ಲಿ MBBS ವಿದ್ಯಾರ್ಥಿ ನೇಣಿಗೆ ಶರಣು! | Speed News Kannada

ಬೀದ‌ರ್ : ರಾಜ್ಯದಲ್ಲಿ ಆಡ್ರೈನ್ ಗೇಮ್ ಗೀಳಿಗೆ ಇದೀಗ ಮತ್ತೊಂದು ಬಲಿಯಾಗಿದೆ. ಆನ್‌ಲೈನ್‌ ಗೇಮ್ ಚಟಕ್ಕೆ ಬಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಸುಮಾರು 80 ಸಾವಿರ ರೂ. ಕಳೆದುಕೊಂಡ ಕಾರಣ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್‌ನ ಬ್ರಿಮ್ಸ್ ವೈದ್ಯಕೀಯ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ.
ಅನಿಷ್ಕಾರ್ ಚವ್ಹಾಣ್ (21 ವ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದುಬಂದಿದೆ.ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ್ ತಾಂಡಾದ ನಿವಾಸಿ ಅನಿಷ್ಕಾರ್‌ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು. ವಸತಿ ನಿಲಯದ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆನ್‌ಲೈನ್ ಗೇಮ್ ನಿಂದ ಹಣ ಕಳೆದುಕೊಂಡಿದಕ್ಕೆ ವಿದ್ಯಾರ್ಥಿ ಅನಿಷ್ಕಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಪೋಷಕರು ದೂರು ಸಲ್ಲಿಸಲಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಮಾಡಲಾಗುವುದು ಎಂದ ಎಸ್ಪಿ ಪ್ರದೀಪ್ ಹೇಳಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.