2026-06-08 01:28:32

ಪಕ್ಷ ವಿರೋಧಿ ಚಟುವಟಿಕೆ ಆಡಿಯೊ ವೈರಲ್: ಜಮೀರ್‌ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ|Speed News Kannada

ಪಕ್ಷ ವಿರೋಧಿ ಚಟುವಟಿಕೆ ಆಡಿಯೊ ವೈರಲ್: ಜಮೀರ್‌ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ|Speed News Kannada

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು ಎಂದು ಸ್ಥಳೀಯ ಮುಖಂಡರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಸೇರಿ ವರಿಷ್ಠರಿಗೆ ಪತ್ರ ಬರೆದಿದ್ದಾರೆ.

ಮಾಜಿ ಮೇಯರ್‌ ಕೆ. ಚಮನ್‌ ಸಾಬ್‌ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ ಅವರು ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್ ಸುರ್ಜೇವಾಲ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಪತ್ರ ಬರೆದು ಕ್ರಮಕ್ಕೆ ಆಗ್ರಹಪಡಿಸಿದ್ದಾರೆ.

ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ವಿರುದ್ಧ ಮಾಜಿ ಸಚಿವ ಜಮೀರ್ ಅಹಮ್ಮದ್‌ ಖಾನ್ ಕೆಲಸ ಮಾಡಿರುವುದು ದೃಢಪಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆಡಿಯೊದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು ದೃಢಪಟ್ಟಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.