2026-06-06 11:30:56

ಕ್ರಿಮಿನಲ್ಸ್ ಪೋಕ್ಸೋ ಆರೋಪಿಗಳನ್ನು ಅಧ್ಯಕ್ಷರನ್ನಾಗಿ ಮಾಡುವುದು ಬಿಜೆಪಿ ಪರಂಪರೆ; ಹರಿಪ್ರಸಾದ್‌ ಆಕ್ರೋಶ|Speed News Kannada

ಕ್ರಿಮಿನಲ್ಸ್ ಪೋಕ್ಸೋ ಆರೋಪಿಗಳನ್ನು ಅಧ್ಯಕ್ಷರನ್ನಾಗಿ ಮಾಡುವುದು ಬಿಜೆಪಿ ಪರಂಪರೆ; ಹರಿಪ್ರಸಾದ್‌ ಆಕ್ರೋಶ|Speed News Kannada

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಪೇಮೆಂಟ್ ಕೊಟ್ಟು ಅಧ್ಯಕ್ಷರಾಗುವುದು ರೂಢಿಯೂ ಇಲ್ಲ, ಕೊಲೆ ಕೇಸಿನಲ್ಲಿ ಗಡಿಪಾರಾದವರು, ಪೋಕ್ಸೋ ಆರೋಪಿಗಳು, ಕ್ರಿಮಿನಲ್ಸ್ ಹಾಗೂ ಜೈಲುವಾಸಿಗಳನ್ನು ಅಧ್ಯಕ್ಷರನ್ನಾಗಿ ಮಾಡುವ ಕೆಟ್ಟ ಪರಂಪರೆಯೂ ಇಲ್ಲ ಎಂದು ತಮ್ಮನ್ನು ಟೀಕಿಸುವ ಬಿಜೆಪಿ ಮುಖಂಡರಿಗೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್‌ ತಿರುಗೇಟು ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಪಂಚಾಯ್ತಿ ಚುನಾವಣೆಯಲ್ಲೂ ಸ್ಪರ್ಧಿಸದೇ ಇದ್ದ ನರೇಂದ್ರ ಮೋದಿಅವರನ್ನು ಗುಜರಾತಿನಲ್ಲಿ ಮುಖ್ಯಮಂತ್ರಿ ಮಾಡಿದವರು ಯಾರು? ಯಾವ ಜನರಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾಗಿದ್ದರು ಎನ್ನುವ ಇತಿಹಾಸವಾದರೂ ಬಿಜೆಪಿಗೆ ನೆನಪಿದೆಯೇ?

ಯಾವ ಚುನಾವಣೆಯನ್ನೂ ನಡೆಸದೇ, ಕನಿಷ್ಟಪಕ್ಷ Rashtriya Swayamsevak Sangh (RSS)  ಸಂಘಪರಿವಾರದಲ್ಲೇ ಚುನಾವಣೆ ಎದುರಿಸದ ಮೋಹನ್ ಭಾಗವತ್ ಗೆ ಯಾವ ಜನರು ಆಯ್ಕೆ ಮಾಡಿದ್ದಾರೆ?"ಜೀ" ಗಳನ್ನು ಚುನಾವಣಾ ಚಾಣುಕ್ಯ ಎಂದು "ಹುಜೂರು" ಎನ್ನುವ BJP Karnataka  ಪಕ್ಷ ಕರ್ನಾಟಕದಲ್ಲಿ ಎಂದೂ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬಂದಿಲ್ಲ, ಬರುವುದೂ ಇಲ್ಲ.

ಬಿಜೆಪಿಯ ಪಾಕಿಸ್ತಾನದ ಮೇಲಿನ ಪ್ರೀತಿಯಂತೂ ನಿನ್ನೆ ಮೊನ್ನೆಯದಲ್ಲ ಅದಕ್ಕೆ ಬಹುದೊಡ್ಡ ಇತಿಹಾಸವೇ ಇದೆ. ದ್ವಿ ರಾಷ್ಟ್ರ ಸಿದ್ದಾಂತದ ಪ್ರತಿಪಾದಿಸಿದ ಸಾವರ್ಕರ್ ಇಂದ ಹಿಡಿದು ಇಂದಿನ ರಸಬಾಳೆ, ಹೊಸಬಾಳೆಯ "ಪಾಕಿಸ್ತಾನದೊಂದಿಗೆ ಮಾತುಕತೆಯ ಬಾಗಿಲು ಮುಚ್ಚಬಾರದು" ಎನ್ನುವವರೆಗೂ ಮುಂದುವರೆಯುತ್ತಲೇ ಇದೆ.

ಹೌದು ಆರ್ ಎಸ್ ಎಸ್ ಮತ್ತು ಬಿಜೆಪಿ ಪ್ರತಿಪಾದಿಸುವ ನಕಲಿ ಹಿಂದೂತ್ವವನ್ನು ವಿರೋಧಿಸುತ್ತಲೇ ಇದ್ದೇನೆ, ವಿರೋಧಿಸುತ್ತಲೇ ಇರುತ್ತೇನೆ. ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ ಎಂದು ಹರಿಪ್ರಸಾದ್‌ ಎಚ್ಚರಿಕೆ ನೀಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.