2026-06-25 02:00:18

arrest warrant against harihara bjp mla bp harish| ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್‌ ಗೆ ಬಂಧನ ಭೀತಿ; ಕಾರಣಗಳೇನು?| Speed News Kannada

arrest warrant against harihara bjp mla bp harish| ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್‌ ಗೆ ಬಂಧನ ಭೀತಿ; ಕಾರಣಗಳೇನು?| Speed News Kannada

ದಾವಣಗೆರೆ: ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್‌ ಬಂಧನಕ್ಕೆ ಬೆಂಗಳೂರಿನ  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಾರೆಂಟ್‌ ಹೊರಡಿಸಿದೆ.

ಜಾತಿನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಹರಿಹರ ಟೌನ್ ಠಾಣೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್​ಗೆ ಕೋರ್ಟ್ ಬಂಧನದ ವಾರಂಟ್ ಜಾರಿ ಮಾಡಿದೆ.

ಜಾತಿ ನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದ್ದಾರೆ. ನಾಳೆ,ಮೇ 7ರಂದುನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಶಾಸಕ ಹರೀಶ್ ಗೆ ಬಂಧನ ಭೀತಿ ಎದುರಾಗಿದೆ.

2023 ವಿಧಾನಸಭೆಯ ಚುನಾವಣಾ ಫಲಿತಾಂಶದ ಮರುದಿನ ಶಾಸಕರನ್ನು ಅಭಿನಂದಿಸಲು ಹರಿಹರ ನಗರಸಭೆಯ ಪೌರಕಾರ್ಮಿಕರು ಹಾಗೂ ಮಾದಿಗ ಸಮಾಜದ ಮುಖಂಡರು ಆಗಮಿಸಿದ್ದರು. ಈ ವೇಳೆ ಒಳಮೀಸಲಾತಿ ನೀಡಿದ್ದರೂ ನಿಮ್ಮ ಸಮಾಜದವರು ನಮ್ಮ ಪಕ್ಷವನ್ನು ಬೆಂಬಲಿಸಿಲ್ಲ, ನಿಮಗೆ ಕೃತಜ್ಞತೆಯಿಲ್ಲ ಎಂದು ಜಾತಿಯ ಹೆಸರನ್ನು ಉಲ್ಲೇಖಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಆರೋಪಿಸಲಾಗಿತ್ತು. ಹರಿಹರ ಬಿಎಸ್‌ ಪಿ ಮುಖಂಡ ಹನುಮಂತಪ್ಪ ಎಂಬವರು ಹರಿಹರನಗರ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದರು.

 

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.