2026-03-07 05:05:31

Arshdeep Singh wrote new history in T20 World Cup | ಟಿ20 ವಿಶ್ವಕಪ್‌ನಲ್ಲಿ ಹೊಸ ಇತಿಹಾಸ ಬರೆದ ಅರ್ಶದೀಪ್ ಸಿಂಗ್ | Speed News Kannada

Arshdeep Singh wrote new history in T20 World Cup | ಟಿ20 ವಿಶ್ವಕಪ್‌ನಲ್ಲಿ ಹೊಸ ಇತಿಹಾಸ ಬರೆದ ಅರ್ಶದೀಪ್ ಸಿಂಗ್ | Speed News Kannada

ಟಿ20 ವಿಶ್ವಕಪ್‌ನ ಸೂಪರ್ 8 ಹಂತದ ಪಂದ್ಯದಲ್ಲಿ ಭಾರತ ಹಾಗೂ ಜಿಂಬಾಬೈ ತಂಡಗಳು ಕಾದಾಟ ನಡೆಸಿದವು. ಈ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ 72 ರನ್‌ಗಳ ಜಯ ಸಾಧಿಸಿತು. ಈ ಮೂಲಕ ಭಾರತ ಟಿ20 ವಿಶ್ವಕಪ್ ಸೆಮಿಫೈನಲ್ ಹಂತವನ್ನು ಪ್ರವೇಶಿಸುವ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಈ ಪಂದ್ಯದಲ್ಲಿ ವೇಗದ ಬೌಲರ್ ಅರ್ಶದೀಪ್ ಸಿಂಗ್ ದೊಡ್ಡ ದಾಖಲೆಯನ್ನು ಬರೆದರು. ಸೂಪ‌ರ್ 8 ಹಂತದ ಪಂದ್ಯದಲ್ಲಿ ಬಿಗುವಿನ ದಾಳಿಯನ್ನು ನಡೆಸಿದ ಎಡಗೈ ವೇಗದ ಬೌಲರ್ ಮಿಂಚಿದರು.
ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ ಅವರ ಅರ್ಧಶತಕದ ಬಲದಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 256 ರನ್ ಸೇರಿಸಿತು. ಗುರಿಯನ್ನು ಹಿಂಬಾಲಿಸಿದ ಜಿಂಬಾಬೈ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 6 ವಿಕೆಟ್ ನಷ್ಟಕ್ಕೆ 184 ರನ್ ಸೇರಿಸಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ಅರ್ಶದೀಪ್ ಸಿಂಗ್ ಅಮೋಘ ಬೌಲಿಂಗ್ ನಡೆಸಿ ಮೂರು ವಿಕೆಟ್ ಪಡೆದು ಮಿಂಚಿದರು. ಈ ಮೂಲಕ ಟಿ20 ವಿಶ್ವಕಪ್‌ನಲ್ಲಿ ದೊಡ್ಡ ದಾಖಲೆಯನ್ನು ಬರೆದರು. ಜಿಂಬಾಬೈ ವಿರುದ್ಧದ ಪಂದ್ಯದಲ್ಲಿ ಅರ್ಶದೀಪ್ ಸಿಂಗ್ 4 ಓವರ್ ಬೌಲಿಂಗ್ ನಡೆಸಿ 24 ರನ್ ನೀಡಿ 3 ವಿಕೆಟ್ ಕಬಳಿಸಿದರು. ಜಿಂಬಾಬೈ ವಿರುದ್ಧ ಅರ್ಶದೀಪ್ ನೀಡಿದ ಪ್ರದರ್ಶನದ ಫಲದಿಂದ ದೊಡ್ಡ ದಾಖಲೆಯನ್ನು ಬರೆದರು. ಟಿ20 ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಸಾಧನೆಯನ್ನು ಅರ್ಶದೀಪ್ ಮಾಡಿದರು. ಇವರು ಟಿ20 ವಿಶ್ವಕಪ್‌ನಲ್ಲಿ ಆಡಿದ 19 ಪಂದ್ಯಗಳಲ್ಲಿ 35 ವಿಕೆಟ್ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ಅರ್ಶದೀಪ್ ಅವರ ದಾಖಲೆ ಅಳಿಸಿ ಹಾಕಿದರು. ಜಸ್ಟ್ರೀತ್ ಬುಮ್ರಾ 23 ಪಂದ್ಯಗಳಲ್ಲಿ 33 ವಿಕೆಟ್ ಪಡೆದಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಭಾರತದ ಪರ ಗರಿಷ್ಠ ವಿಕೆಟ್ ಪಡೆದ ಬೌಲರ್ಸ್
ಅರ್ಶದೀಪ್ ಸಿಂಗ್, 19 ಪಂದ್ಯ, 35 ವಿಕೆಟ್
ಜಸ್ಮಿತ್ ಬುಮ್ರಾ, 23 ಪಂದ್ಯ, 33 ವಿಕೆಟ್
ಆರ್.ಅಶ್ವಿನ್, 24 ಪಂದ್ಯ, 32 ವಿಕೆಟ್
ಹಾರ್ದಿಕ್ ಪಾಂಡ್ಯ, 30 ಪಂದ್ಯ, 29 ವಿಕೆಟ್
ರವೀಂದ್ರ ಜಡೇಜಾ, 30 ಪಂದ್ಯ, 22 ವಿಕೆಟ್ 

37 ವರ್ಷದ ಅರ್ಶದೀಪ್ ಟಿ20 ವಿಶ್ವಕಪ್‌ನಲ್ಲಿ ಇನ್ನು ಕೆಲವು ಪಂದ್ಯಗಳನ್ನು ಈ ಆವೃತ್ತಿಯಲ್ಲಿ ಆಡಲಿದ್ದಾರೆ. ಹೀಗಾಗಿ ಇನ್ನು ದಾಖಲೆಗಳನ್ನು ಬರೆಯುವ ಕನಸಿನಲ್ಲಿದ್ದಾರೆ. ಟೂರ್ನಿಯ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಕೀರ್ತಿ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಅವರದ್ದಾಗಿದೆ. ಶಕೀಬ್ 43 ಪಂದ್ಯಗಳಲ್ಲಿ 50 ವಿಕೆಟ್ ಪಡೆದಿದ್ದಾರೆ. ಆಸ್ಟ್ರೇಲಿಯಾದ ಆಡಂ ಜಂಪಾ 25 ಪಂದ್ಯಗಳಲ್ಲಿ 44 ವಿಕೆಟ್ ಪಡೆದಿದ್ದು ಗರಿಷ್ಠ ವಿಕೆಟ್ ಪಡೆದ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಅಫ್ಘಾನಿಸ್ತಾನದ ರಶೀದ್ ಖಾನ್ 43 ವಿಕೆಟ್ ಪಡೆದು ಬೀಗಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.