2026-03-07 06:04:05

Assam leaders legacy | ಬೆಳಗ್ಗೆ ರಾಜೀನಾಮೆ ಸಂಜೆ ವಾಪಸ್ ಅಸ್ಸಾಂ ಕೈ ಮುಖಂಡನ ವರಸೆ | Speed News Kannada

Assam leaders legacy | ಬೆಳಗ್ಗೆ ರಾಜೀನಾಮೆ ಸಂಜೆ ವಾಪಸ್ ಅಸ್ಸಾಂ ಕೈ ಮುಖಂಡನ ವರಸೆ | Speed News Kannada

ಗುವಾಹಟಿ: ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿರುವ ಅಸ್ಸಾಂನಲ್ಲಿ ಸ್ಥಳೀಯ ನಾಯಕರೊಂದಿಗಿನ ಭಿನ್ನಾಭಿಪ್ರಾಯದಿಂದ ಸೋಮವಾರ(ಫೆ. 16) 
ಬೆಳಗ್ಗೆ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿ ಸಂಜೆ ವೇಳೆಗೆ ಹಿಂಪಡೆದ ವಿದ್ಯಾಮಾನವೊಂದು ಅಸ್ಸಾಂ ನಲ್ಲಿ ನಡೆದಿದೆ. 
ಅಸ್ಸಾಂ ರಾಜ್ಯದ ಮಾಜಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ಅವರು ಇಂದು ಬೆಳಗ್ಗೆ ಪಕ್ಷಕ್ಕೆ ರಾಜೀನಾಮೆ ನೀಡಿ ಪಕ್ಷಕ್ಕೆ ಶಾಕ್‌ ನೀಡಿದ್ದರು. ಇಂದು ಬೆಳಗ್ಗೆ ಎಂಟು ಗಂಟೆಗೆ ರಾಜೀನಾಮೆ ನೀಡಿದ್ಧೇನೆ. ಕಾರಣಗಳನ್ನೂ ವಿವರಿಸಿದ್ದೇನೆ. ಮೂರು ದಶಕಗಳ ಕಾಲ ಪಕ್ಷಕ್ಕೆ ದುಡಿದಿದ್ದೇನೆ ಎಂದು ಹೇಳಿದ್ದರು. 
 ಹೈಕಮಾಂಡ್ ಮಧ್ಯಪ್ರವೇಶದ ನಂತರ ಸಂಜೆ ವೇಳೆಗೆ ರಾಜೀನಾಮೆ ವಾಪಸ್ ಪಡೆದಿದ್ದಾರೆ.
ಹೈಕಮಾಂಡ್ ಸ್ಥಳೀಯ ನಾಯಕರನ್ನು ಬೋರಾ ಅವರ ಮನವೊಲಿಸುವಂತೆ ಸೂಚನೆ ನೀಡಿತ್ತು. ಆ ಪ್ರಕಾರ ಕಾಂಗ್ರೆಸ್ ಅದ್ಯಕ್ಷ ಗೌರವ್ ಗೊಗೊಯ್, ಎಐಸಿಸಿ ರಾಜ್ಯ ಉಸ್ತುವಾರಿ ಜಿತೇಂದ್ರ ಸಿಂಗ್ ಬೋರಾ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಈ ವೇಳೆ ಹೈಕಮಾಂಡ್ ಜೊತೆಗೂ ದೂರವಾಣಿಯಲ್ಲಿ ಬೋರಾ ಮಾತನಾಡಿದ್ದರು. ಅವರು ಮನವೊಲಿಸಿದ ನಂತರ ರಾಜೀನಾಮೆ ನಿರ್ಧಾರವನ್ನು ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.
ನಂತರ ಮಾತನಾಡಿದ ಜಿತೇಂದ್ರ ಸಿಂಗ್‌, ಕಾಂಗ್ರೆಸ್ ಅಧ್ಯಕ್ಷರು ಅವರ ರಾಜೀನಾಮೆಯನ್ನು ಅಂಗೀಕರಿಸಿಲ್ಲ. ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ನಾಯಕತ್ವ ಅವರೊಂದಿಗೆ ದೀರ್ಘ ಚರ್ಚೆ ನಡೆಸಲಾಗಿದ್ದು, ಈಗ ರಾಜೀನಾಮೆ ವಾಪಸ್ ಪಡೆದಿದ್ದಾರೆ. ಸಮಸ್ಯೆ ಬಗೆಹರಿದಿದೆ ಎಂದು ಹೇಳಿದ್ದಾರೆ.
ಬೋರಾ ಪ್ರತಿಕ್ರಿಯಿಸಿ, ತಮ್ಮ ನಿರ್ಧಾರವನ್ನು ಮರುಪರಿಶೀಲಿಸಲು ಹೈಕಮಾಂಡ್‌ನಿಂದ ಹೆಚ್ಚುವರಿ ಸಮಯವನ್ನು ಕೋರಿದ್ದೇನೆ ಎಂದು ತಿಳಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.