2026-04-23 09:36:40

Assembly election seat distribution, Annamalai unhappy | ವಿಧಾನಸಭಾ ಚುನಾವಣೆ ಸೀಟು ಹಂಚಿಕೆ, ಅಣ್ಣಾಮಲೈ ಅಸಮಾಧಾನ | Speed news kannada

Assembly election seat distribution, Annamalai unhappy | ವಿಧಾನಸಭಾ ಚುನಾವಣೆ ಸೀಟು ಹಂಚಿಕೆ, ಅಣ್ಣಾಮಲೈ ಅಸಮಾಧಾನ | Speed news kannada

ತಮಿಳುನಾಡು ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಎನ್ಡಿಎ ಪ್ರಮುಖ ಪಾಲುದಾರ ಪಕ್ಷಗಳಾದ ಬಿಜೆಪಿ ಮತ್ತು ಎಐಎಡಿಎಂಕೆ ನಡುವಿನ ಸೀಟು ಹಂಚಿಕೆ ಪ್ರಕ್ರಿಯೆಯು ಅಸಮಾಧಾನಕ್ಕೆ ಕಾರಣವಾಗಿದ್ದು,ವಿಧಾನಸಭಾ ಚುನಾವಣೆಗೆ ಡಿಎಂಕೆ ತನ್ನ ಮಿತ್ರ ಪಕ್ಷವಾದ ವಿಸಿಕೆ ಜತೆಗೆ ಸೀಟು ಹಂಚಿಕೆ ಒಪ್ಪಂದ ಮಾಡಿಕೊಂಡಿದೆ. ಬಿಜೆಪಿಗೆ ಹಂಚಿಕೆಯಾದ ಕ್ಷೇತ್ರಗಳ ಘೋಷಣೆಯ ಒಂದು ದಿನದ ನಂತರ, ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ವರದಿಯಾಗಿದೆ.

ಹೈ ಕಮಾಂಡ್ ನಾಯಕರಿಗೆ ಪತ್ರ ಬರೆದಿರುವ ಅಣ್ಣಾಮಲೈ, ಹಲವು ಪ್ರಮುಖ ಕ್ಷೇತ್ರಗಳನ್ನು ಎಐಎಡಿಎಂಕೆ ಬಿಟ್ಟುಕೊಟ್ಟಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ಅಸಮಾಧಾನದ ನಡುವೆಯೇ, ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ಹೈಕಮಾಂಡ್‌ಗೆ ತಿಳಿಸಿದ್ದಾರೆ ಎನ್ನುವ ವಿಷಯ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಬಿ ಎಲ್ ಸಂತೋಷ್ ಅಧ್ಯಕ್ಷತೆಯಲ್ಲಿ ಚೆನ್ನೈನ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆ ನಡೆಯಿತು. ಹಂಚಿಕೆಯಾದ ಕ್ಷೇತ್ರಗಳು ಸಂಭಾವ್ಯ ಅಭ್ಯರ್ಥಿಗಳು ಮತ್ತು ಚುನಾವಣೆಗೆ ಸಂಬಂಧಿಸಿದ ಇತರ ವಿಷಯಗಳ ಕುರಿತು ಚರ್ಚಿಸಲು ಸಭೆ ಕರೆಯಲಾಗಿತ್ತು, ಆದರೆ ಅಣ್ಣಾಮಲೈ ಸಭೆಯಲ್ಲಿ ಭಾಗವಹಿಸಲ್ಲ, ಇನ್ನೂ ಈ ಸಭೆಯ ಹಿನ್ನೆಲೆ ಅಣ್ಣಾಮಲೈ ಚುನಾವಣೆಯಲ್ಲಿ ಸ್ಪರ್ದಿಸಲು ಹಿಂದೇಟು ಹಾಕಿದ್ದಾರೆ

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.